ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಔಷಧ ಉತ್ಪಾದನಾ ಕಂಪನಿ ‘ರೆಸೋನೆನ್ಸ್ ಲ್ಯಾಬೊರೇಟರಿ’ಗೆ ₹11.68 ಕೋಟಿ ಪರಿಸರ ದಂಡ ವಿಧಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಶಿಫಾರಸು ಮಾಡಿದೆ.
ಈ ಕಂಪನಿಯು ಪರಿಸರ ಅನುಮತಿ ಪಡೆಯದೇ ದೀರ್ಘಕಾಲದಿಂದ ಬೃಹತ್ ಔಷಧ ಉತ್ಪಾದನಾ ಘಟಕ ನಡೆಸುತ್ತಿದೆ. ಉಲ್ಲಂಘನೆಯ ವಿಭಾಗದ ಅಡಿಯಲ್ಲಿ 2020ರ ಆಗಸ್ಟ್‌ನಲ್ಲಿ ಕರ್ನಾಟಕ ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದಿಂದ ಪರಿಸರ ಅನುಮತಿ ಪಡೆದಿದೆ. ಹಿಂದಿನ ಉಲ್ಲಂಘನೆಗಳಿಗೆ ಪರಿಹಾರವನ್ನು ಮೌಲ್ಯಮಾಪನ ಮಾಡಿ ದಂಡ ಪಾವತಿಸದ ಹೊರತು ಪರಿಸರ ಅನುಮತಿ ನೀಡುವಂತಿಲ್ಲ. ನಿಯಮಬಾಹಿರವಾಗಿ ಪರಿಸರ ಅನುಮತಿ ನೀಡಲಾಗಿದೆ. ಜತೆಗೆ, ಪ್ರಾಧಿಕಾರಕ್ಕೆ ಈ ಅಧಿಕಾರವೇ ಇಲ್ಲ ಎಂದು ಆರೋಪಿಸಿ ಎಸ್.ಕೆ. ವಿಜಯಕುಮಾರ್ ಎಂಬುವವರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ದಕ್ಷಿಣ ವಲಯ ಪೀಠದ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಈ ವರ್ಷದ ಫೆಬ್ರವರಿ 1ರಂದು ಆದೇಶ ಹೊರಡಿಸಿ, ‘ಪ್ರಾಧಿಕಾರವು ಕ್ಯೋಟೋ ಪ್ರೋಟೋಕಾಲ್ ಪ್ರಕಾರ, ಪರಿಸರದ ಮೇಲಾಗಿರುವ ಹಾನಿಯ ಲೆಕ್ಕಾಚಾರ ಮಾಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ. ಕಂಪನಿಯ ಮನವಿಯ ಮೇರೆಗೆ ಪ್ರಾಧಿಕಾರವು ಈ ರೀತಿ ಮೌಲ್ಯಮಾಪನ ಮಾಡಿತ್ತು. ಇದು ಸರಿಯಲ್ಲ’ ಎಂದು ಹೇಳಿತ್ತು.
ಕೇಂದ್ರ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಪರಿಸರ ಹಾನಿಯ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪೀಠ ನಿರ್ದೇಶನ ನೀಡಿತ್ತು. ಮಂಡಳಿಯ ಪರಿಸರ ಅಧಿಕಾರಿ ರಾಜಶೇಖರ ಎಸ್. ಅವರು ಪೀಠಕ್ಕೆ ಶುಕ್ರವಾರ ವರದಿ ಸಲ್ಲಿಸಿದ್ದು, ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದಿನ ಆದೇಶ ಹೊರಡಿಸಬೇಕು ಎಂದು ಕೋರಿದ್ದಾರೆ. ಪ್ರಕರಣದ ಅಂತಿಮ ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ.
ಕ್ಯೋಟೋ ಪ್ರೋಟೋಕಾಲ್ ನಿಯಮ ಅನುಸರಿಸಿ ಪರಿಸರಕ್ಕೆ ಆಗಿರುವ ಹಾನಿಯ ಲೆಕ್ಕಾಚಾರ ನಡೆಸಲಾಗಿದೆ. ಈ ಪ್ರಕಾರ, ದಂಡವು 17.63 ಲಕ್ಷ ಆಗಲಿದೆ ಎಂದು ಕಂಪನಿಯು ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದೆ. ಇನ್ನೊಂದೆಡೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ, ಪರಿಸರ ಉಲ್ಲಂಘನೆಯ ಕಾರಣದಿಂದ ಪಡೆದ ಆರ್ಥಿಕ ಲಾಭಕ್ಕೆ ಸಂಬಂಧಿಸಿದಂತೆ/ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಹಾನಿಗೊಳಗಾದ ಪರಿಸರವನ್ನು ಲೆಕ್ಕಾಚಾರ ಮಾಡಲು ಅಥವಾ ನಿರ್ಣಯಿಸಲು ಯಾವುದೇ ಸೂತ್ರವಿಲ್ಲ ಎಂದೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮಾಲಿನ್ಯ ನಿಯಂತ್ರಣ ಮಂಡಳಿಯ ವರ್ಗೀಕರಣದ ಪ್ರಕಾರ, ಇದು ಕೆಂಪು ವರ್ಗದ ಕಂಪನಿ, ಕಂಪನಿ 2012ರ ಫೆಬ್ರುವರಿ 8ರಿಂದ ಕಾರ್ಯಾಚರಣೆ ನಡೆಸುತ್ತಿದೆ. ಪರಿಸರ ಅನುಮತಿ ಪಡೆದಿದ್ದು 2020ರ ಆಗಸ್ಟ್ 24 ರಿಂದ ಪರಿಸರ ಅನುಮತಿ ಇಲ್ಲದೆ 3,117 ದಿನ ಕಾರ್ಯಾಚರಣೆ ನಡೆಸಲಾಗಿದೆ. ಈ ಕಂಪನಿಯ ಯೋಜನಾ ವೆಚ್ಚ 110 ಕೋಟಿಯಿಂದ 725 ಕೋಟಿ ನಡುವೆ ಇದೆ. ಹಾಗಾಗಿ, ಇದೊಂದು ದೊಡ್ಡ ಕಂಪನಿ. 50 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ಪ್ರದೇಶದಲ್ಲಿ ಈ ಕಂಪನಿ ಇದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿ ಪ್ರಕಾರ, ಪರಿಸರ ಪರಿಹಾರ 711.68 ಕೋಟಿ ಆಗುತ್ತದೆ ಎಂದೂ ವರದಿಯಲ್ಲಿ ತಿಳಿಸಲಾಗಿದೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…