ಬಿಗ್‌ಬಾಸ್ ಕನ್ನಡ 12ನೇ ಆವೃತ್ತಿಯ ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ ಮುಗಿದು, ಎರಡನೇ ವಾರಕ್ಕೆ ಕಾಲಿಟ್ಟಿದ್ದು ಅಷ್ಟರಲ್ಲಾಗಲೇ ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದೆ.
ರಾಮನಗರ ತಹಶೀಲ್ದರ್ ತೇಜಸ್ವಿನಿ ಸಮ್ಮುಖದಲ್ಲಿ ಅಧಿಕಾರಿಗಳು ತೆರಳಿ ಬೀಗ ಹಾಕಿದ್ದಾರೆ. ಅಲ್ಲದೆ ಬಿಗ್ ಬಾಸ್ ಮನೆಯಿಂದ ಸ್ಪರ್ಧಿಗಳನ್ನು ಹೊರಗೆ ಕಳುಹಿಸಲು 7.30ರವರೆಗೆ ಸಮಯ ನೀಡಲಾಗಿದೆ ಎಂದು ವರದಿಯಾಗಿದೆ. ಒಂದೇ ವೇಳೆ ಬಿಗ್ ಬಾಸ್ ಸ್ಪರ್ಧಿಗಳು ಹೊರಬಂದರೆ ರಿಯಾಲಿಟಿ ಶೋ ಸ್ಥಗಿತಗೊಳ್ಳಲಿದೆ.
ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಲಿರಲಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಇದೀಗ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಡೆಟ್ ಕಂಪನಿಗೆ ಬೀಗ ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 17 ಮಂದಿ ಸ್ಪರ್ಧಿಗಳಿದ್ದು ನೂರಾರು ತಂತ್ರಜ್ಞರು ಈ ರಿಯಾಲಿಟಿ ಶೋಗಾಗಿ ಕೆಲಸ ಮಾಡುತ್ತಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್ ಅನ್ನು ಜಾಲಿವುಡ್ ಮಾನೇಜ್ಮೆಂಟ್ ಸ್ವೀಕರಿಸಿದೆ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…