ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ-ಸಚಿವ ಕೆ.ಎಚ್. ಮುನಿಯಪ್ಪ

ಪ್ರಕೃತಿ ವಿಕೋಪಗಳನ್ನು ತಪ್ಪಿಸಿ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾದ ‘ವನ ಮಹೋತ್ಸವ-2024’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ತಮ್ಮ ಜಮೀನುಗಳಲ್ಲಿ ಮೂರನೇ ಒಂದು ಭಾಗ ಮಾವು, ತೆಂಗು, ಹಲಸು, ನೇರಳೆ ಮುಂತಾದ ಆದಾಯದ ಗಿಡ-ಮರಗಳನ್ನು ಬೆಳೆಸಿದರೆ ಆದಾಯದ ಜೊತೆಗೆ ಪರಿಸರ ಸಮತೋಲನ ನಿರ್ಮಾಣವಾಗುತ್ತದೆ. ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಗಿಡ ಮರಗಳನ್ನು ಬೆಳೆಸುವುದರಿಂದ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಪ್ಪಿಸಬಹುದು. ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಸ್ತೆಗಳ ಎರಡು ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡಲಾಗುತ್ತಿದೆ. ಪ್ರತಿಯೊಬ್ಬರೂ ಮನೆಗಳ ಸುತ್ತಮುತ್ತ ಗಿಡ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು. ಇದರಿಂದ ವಾತಾವರಣದ ಮಾಲಿನ್ಯವನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗಾರ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 2,298 ಕಿ.ಮೀ ವ್ಯಾಪ್ತಿ ಹೊಂದಿದ್ದು 22,800 ಹೆಕ್ಟೇರ್ ಭೂ ವಿಸ್ತೀರ್ಣ ಹೊಂದಿದೆ. 203.89 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಒಟ್ಟು ಭೂ ಪ್ರದೇಶದಲ್ಲಿ ಶೇಕಡ 8.8 ರಷ್ಟು ಅರಣ್ಯ ಭೂಮಿ ಆವೃತ್ತಿಯಾಗಿದೆ. ಈ ನಿಟ್ಟಿನಲ್ಲಿ ಪರಿಸರ ಸಮತೋಲನ ಕಾಪಾಡುವ ದೃಷ್ಟಿಯಿಂದ ಅರಣ್ಯೀಕರಣ, ವನ್ಯಜೀವಿ ಸಂರಕ್ಷಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಕಳೆದ ಐದು ವರ್ಷಗಳಲ್ಲಿ 2400 ಹೆಕ್ಟೇರ್ ನೆಡುತೋಪು ಮಾಡಲಾಗಿದೆ. 383 ರೈತ ಫಲಾನುಭವಿಗಳಿಗೆ 16 ಲಕ್ಷ ಸಸಿಗಳನ್ನು ವಿತರಿಸಲಾಗಿದ್ದು ಗಿಡಗಳನ್ನು ಬೆಳೆಸಿ ಪೋಷಿಸಲು ಇದುವರೆಗೆ 74 ಲಕ್ಷ ರೂ.ಗಳ ಹಣ ರೈತ ಫಲಾನುಭವಿಗಳಿಗೆ ನೀಡಲಾಗಿದೆ ಎಂದರು.

ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ 3065 ಫಲಾನುಭವಿಗಳಿಗೆ ಸಸಿ ವಿತರಿಸಿ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ. 2024 ನೇ ಸಾಲಿನಲ್ಲಿ 251 ಲಕ್ಷ ರೂ.ಗಳ ಯೋಜನಾ ವೆಚ್ಚ ರೂಪಿಸಲಾಗಿದ್ದು 165 ಕಿಲೋ ಮೀಟರ್ ನೆಡುತೋಪು ನಿರ್ಮಿಸಲಾಗಿದೆ ಎಂದು ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಅರಣ್ಯ ಮತ್ತು ಸಾಮಾಜಿಕ ಅರಣ್ಯ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ ಸಿಬ್ಬಂದಿಗೆ ಸಚಿವರು ಪ್ರಶಂಸೆ ಪತ್ರ ವಿತರಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ರಾಜಣ್ಣ, ಕುಂದಾಣ ಗ್ರಾ.ಪಂ ಅಧ್ಯಕ್ಷರಾದ ನೇತ್ರಾವತಿ ಎ.ಆರ್, ಉಪಾಧ್ಯಕ್ಷರಾದ ನೀಲಮ್ಮ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧಾ, ಉಪವಿಭಾಗಾಧಿಕಾರಿ ದುರ್ಗಶ್ರೀ ಎನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ್. ಪಿ.ಎನ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

30 minutes ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

13 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

16 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

18 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

21 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

22 hours ago