ಶಾಲಾ ಆವರಣದಲ್ಲಿ ಮಳೆ ನೀರು ಹಿಂಗಿಸುವುದು, ನೀರು ಶುದ್ಧೀಕಾರಣ, ನೀರು ಮರುಬಳಕೆ ಮತ್ತು ಶಾಲಾ ಆವರಣದಲ್ಲಿ ಹೆಚ್ಚು ಗಿಡಮರಗಳನ್ನು ಬೆಳಸುವುದರ ಮೂಲಕ ಪರಿಸರ ಸ್ನೇಹಿ ಕಾರ್ಯಗಳಿಗೆ ಎಲ್ಲರು ಒತ್ತು ನೀಡಲಾಗುವುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್. ಚಕ್ರವರ್ತಿ ತಿಳಿಸಿದರು.
ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆ, ಜವಾಹರ್ ನವೋದಯ ವಿದ್ಯಾಲಯ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿರುವ ನವೋದಯ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನದವನ್ನು ಆಚರಿಸಿ, ಈ ವೇಳೆ ಮಾತನಾಡಿದರು.
ವಲಯ ಅರಣ್ಯ ಅಧಿಕಾರಿಗಳಾದ ರಾಜಶೇಖರ್ ಮಾತನಾಡಿ, ಇಲಾಖೆಯ ವತಿಯಿಂದ ತಾಲೂಕಿನಾದ್ಯಂತ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಎಲ್ಲರೂ ಪ್ರತಿದಿನವನ್ನೂ ಪರಿಸರ ದಿನದಂತೆ ಪರಿಸರವನ್ನು ಕಾಪಾಡಬೇಕು ಎಂದರು.
ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಚಂದ್ರಕುಮಾರ್, ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ, ಡಾ. ಶಾಂತನು ಗುಪ್ತ, ಕಾರ್ತಿಕ್, ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…