Categories: ಲೇಖನ

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ….

ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ,
ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ,
ಪೋಷಕರ ಅತಿಯಾದ ದುರಾಸೆ,
ವಿದ್ಯಾರ್ಥಿಗಳ ನಿರ್ಲಜ್ಜತೆ ಮತ್ತು ಸೋಮಾರಿತನ ಹಾಗೂ ಅಡ್ಡದಾರಿ ಹುಡುಕುವ ಮನೋಭಾವ,
ಮಾಧ್ಯಮಗಳ ವಿವೇಚನಾ ರಹಿತ ಚರ್ಚೆಗಳ ದುಷ್ಪರಿಣಾಮ ಒಟ್ಟಾರೆ ವ್ಯವಸ್ಥೆಯ ಬಗ್ಗೆ ಅಸಹ್ಯ ಉಂಟುಮಾಡಿದೆ……

ಪರೀಕ್ಷಾ ಅಕ್ರಮಗಳು……

ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ……

ಶೈಕ್ಷಣಿಕ ವ್ಯವಸ್ಥೆಯ ಆಧಾರ ಸ್ತಂಭವಾದ ಶಿಕ್ಷಕರು ನಾಚಿಕೆ ಪಟ್ಟು ಕೊಳ್ಳಬೇಕಾದ, ಯುಧ್ದೋಪಾದಿಯಲ್ಲಿ, ಮಿಲಿಟರಿ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ಪರೀಕ್ಷೆ ನಡೆಸುವ ಅಪನಂಬಿಕೆಯ ದುರಂತ ವ್ಯವಸ್ಥೆಯಲ್ಲಿ ನಾವು ನೀವು…..

ಭಾರತ ಈ ಕ್ಷಣದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ ಹೊಂದುತ್ತಿದೆ, ವಿಶ್ವಗುರು ಪಟ್ಟಕ್ಕೆ ಮುನ್ನಡೆಯುತ್ತಿದೆ ಎಂದು ಏನೇ ಹೇಳಿದರು ಸಹ ಆಂತರಿಕವಾಗಿ ಶೈಕ್ಷಣಿಕವಾಗಿಯೇ ಆಗಿರಲಿ, ಉದ್ಯೋಗಕ್ಕಾಗಿಯೇ ಆಗಿರಲಿ ಪರೀಕ್ಷೆಗಳನ್ನು ನಡೆಸಿ ಅರ್ಹರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಸಂಪೂರ್ಣ ವಿಫಲವಾಗಿದೆ ಅಥವಾ ನಿರಾಶದಾಯಕವಾಗಿದೆ ಅಥವಾ ಜನರ ನಂಬಿಕೆ ಕಳೆದುಕೊಂಡು ಅನುಮಾನ ಹುಟ್ಟಿಸುತ್ತಿದೆ ಅಥವಾ ಭ್ರಮನಿರಸನವಾಗಿದೆ…….

ಉದ್ಯೋಗಕ್ಕಾಗಿಯೋ, ಕಾಲೇಜು ಪ್ರವೇಶಕ್ಕಾಗಿಯೋ, ವೃತ್ತಿಪರ ಕೋರ್ಸ್ ಗಳ ಆಯ್ಕೆಗಾಗಿಯೋ ನಡೆಯುವ ಪ್ರತಿ ಪರೀಕ್ಷೆಯಲ್ಲೂ, ಭಿನ್ನ – ಭಿನ್ನವಾಗಿ, ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ, ಕಲ್ಪಿಸಲು ಅಸಾಧ್ಯವಾದ ರೂಪದಲ್ಲಿ, ದೊಡ್ಡ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು, ಅದರ ಫಲಾನುಭವಿಗಳು ಎಲ್ಲರೂ ಸೇರಿ ಬೇರೆ ಬೇರೆ ರೀತಿ ವಂಚಿಸುತ್ತಿದ್ದಾರೆ…….

ಅಧಿಕೃತ ಮಾಹಿತಿಯ ಪ್ರಕಾರ ಕಳೆದು ಹತ್ತು ವರ್ಷಗಳಲ್ಲಿ ಇಡೀ ದೇಶದಲ್ಲಿ 90 ಕ್ಕೂ ಹೆಚ್ಚು ಪರೀಕ್ಷೆಗಳು ರದ್ದಾಗಿವೆ ಅಥವಾ ಮುಂದೂಡಲ್ಪಟ್ಟಿವೆ ಮತ್ತು ಪುನಃ ಪರೀಕ್ಷೆ ನಡೆಸಲಾಗಿದೆ. ಅಂದರೆ ಬಹಳ ಹಿಂದೆ ಅಪರೂಪವಾಗುತ್ತಿದ್ದ ಪರೀಕ್ಷಾ ಆಕ್ರಮಗಳು ಇದೀಗ ಸಹಜವಾಗುತ್ತಿದೆ. ಇದು ಕೇವಲ ಅಧಿಕೃತ ಅಂಕಿ ಅಂಶಗಳು ಮಾತ್ರ. ನಮ್ಮ ಅನುಭವದ ಪ್ರಕಾರ ಹೇಳುವುದಾದರೆ ಅನಧಿಕೃತವಾಗಿ ಇದಕ್ಕಿಂತ ಹತ್ತುಪಟ್ಟು ಅವ್ಯವಹಾರಗಳು ಕಣ್ಣಿಗೆ ಕಾಣದಂತೆ ವ್ಯಾಪಕವಾಗಿ ನಡೆಯುತ್ತಿದೆ……

ಅಂದರೆ ನಮ್ಮ ವ್ಯವಸ್ಥೆಯ ನಿಜವಾದ ಆಧಾರ ಸ್ಥಂಭಗಳ ಆಯ್ಕೆಯೇ ಈ ರೀತಿ ಮೂಲದಲ್ಲಿಯೇ ಭ್ರಷ್ಟಗೊಂಡಿರುವಾಗ ಇನ್ನು ಆಡಳಿತಾತ್ಮಕ, ರಾಜಕೀಯ ಸುಧಾರಣೆಯ ಮಾತುಗಳಿಗೆ ಯಾವ ಅರ್ಥವಿದೆ. ಶ್ರಮಪಟ್ಟು ಕೆಲಸ ಮಾಡುವ ವ್ಯಕ್ತಿಗಳಿಗೆ ಒಂದು ವ್ಯವಸ್ಥೆಯಲ್ಲಿ ಸರಿಯಾದ ಸ್ಥಾನಮಾನ, ಸಾಮಾಜಿಕ ನ್ಯಾಯ, ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದಿದ್ದರೆ ಆ ಇಡೀ ವ್ಯವಸ್ಥೆ ನಿಧಾನವಾಗಿ ಕುಸಿಯ ತೊಡಗುತ್ತದೆ. ಈಗ ಆಗಿರುವುದು ಅದೇ……

ದೊಡ್ಡ ಮಟ್ಟದ ಅಧಿಕಾರಿಗಳೇ ಆಗಿರಲಿ, ಡಾಕ್ಟರ್, ಇಂಜಿನಿಯರ್, ಲೆಕ್ಚರರ್, ವಿಜ್ಞಾನಿಗಳಂತ ದೊಡ್ಡ ವೃತ್ತಿಪರರೇ ಆಗಿರಲಿ ಎಲ್ಲರೂ ಸಹ ಈ ರೀತಿಯ ಭ್ರಷ್ಟ ವ್ಯವಸ್ಥೆಯಲ್ಲಿ ರೂಪಗೊಂಡಿದ್ದೇಯಾದರೆ ಮಕ್ಕಳ ಮುಂದಿನ ಭವಿಷ್ಯವೇನು. ಇದಕ್ಕೆ ಮತ್ತೊಂದು ಕಂಠಕಪ್ರಾಯವಾಗಿ ಸೃಷ್ಟಿಯಾಗಿರುವುದು ಕೋಚಿಂಗ್ ಸೆಂಟರ್ ಗಳೆಂಬ ಕೆಲವು ಧನದಾಹಿ ಅಕಾಡೆಮಿಗಳು. ಇವು ಒಂದು ತರಬೇತಿಯ ಕೇಂದ್ರವಾಗಿ ಮಾತ್ರ ಉಳಿದಿಲ್ಲ. ಮಕ್ಕಳನ್ನು ಅಂಕಗಳಿಗೆ ಸಿದ್ಧತೆಗೊಳಿಸುವ ಕಾರ್ಖಾನೆಗಳಾಗಿ ಮಾರ್ಪಟ್ಟಿವೆ……

ರಾಜಸ್ಥಾನ ರಾಜ್ಯದ ಕೋಟಾದ ಈ ರೀತಿಯ ತರಬೇತಿ ಕೇಂದ್ರಗಳಲ್ಲಿ ನಡೆಯುತ್ತಿರುವ ಆತ್ಮಹತ್ಯೆಗಳು ಇದಕ್ಕೆ ಒಂದು ಜೀವಂತ ನಿದರ್ಶನ. ಏನನ್ನೂ ಸಾಧಿಸದೆ ಎಲ್ಲವನ್ನು ಸಾಧಿಸಿದಂತೆ ಮಾತನಾಡುತ್ತಿರುವ ಈ ಸಂದರ್ಭದಲ್ಲಿ ಇಡೀ ದೇಶ ಮೌಲ್ಯಗಳ ಕುರಿತು ಚಿಂತಿಸಬೇಕಾಗುತ್ತದೆ. ಮೌಲ್ಯಗಳನ್ನು ಹೊರತುಪಡಿಸಿದ ಯಾವುದೂ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಎಷ್ಟೇ ಸಮಿತಿಗಳನ್ನು ರಚಿಸಿ, ಯಾರು ಎಷ್ಟೇ ವರದಿಗಳನ್ನು ಕೊಟ್ಟರು ಸಮಾಜದಲ್ಲಿ ಕುಸಿಯುತ್ತಿರುವ ನೈತಿಕ ಮೌಲ್ಯಗಳು ಮತ್ತು ಹೆಚ್ಚಾಗುತ್ತಿರುವ ಹಣ, ಅಧಿಕಾರ ಕೇಂದ್ರೀಕೃತ ಮಾನವನ ವಿಕೃತ ಸ್ವಭಾವಗಳು, ಅನಿವಾರ್ಯತೆಗಳು ಅಕ್ರಮಗಳನ್ನು ಹೆಚ್ಚು ಹೆಚ್ಚು ಮಾಡುತ್ತಿದೆ…….

ಕಾನೂನುಗಳು ಚಾಪೆಯಂತೆ ಇದ್ದರೆ ಈ ಭ್ರಷ್ಟ ಅಪರಾಧಿಗಳು ಅದನ್ನು ಮೀರಿ ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ದೇಶದಾದ್ಯಂತ ಅನೇಕ ವಿದ್ಯಾರ್ಥಿಗಳು ಮತ್ತು ಪೋಷಕರು ದೊಡ್ಡಮಟ್ಟದ ಪ್ರತಿಭಟನೆ ನಡೆಸುವಾಗ ನಿಜಕ್ಕೂ ಮನಸ್ಸು ವಿಹ್ಲವಗೊಂಡಿದೆ. ಇನ್ನೂ ಈ ವ್ಯವಸ್ಥೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳದ ಎಳೆ ವಯಸ್ಸಿನ ವಿದ್ಯಾರ್ಥಿಗಳು, ನ್ಯಾಯಕ್ಕಾಗಿ ಪ್ರತಿಭಟಿಸುವ ದುಸ್ಥಿತಿ ಮತ್ತು ತಾವೇ ಅದರ ಒಂದು ಭಾಗವಾಗುವ ವಿಚಿತ್ರ ಪರಿಸ್ಥಿತಿ ನಮ್ಮಲ್ಲಿದೆ….

ಮೊದಲೇ ಹೇಳಿದಂತೆ ಇದಕ್ಕೆ ದಿಢೀರನೆ ಎಷ್ಟೇ ಕಠಿಣ ಕಾನೂನುಗಳನ್ನು ಜಾರಿಗೆ ತಂದರೂ ಸಮಸ್ಯೆ ಅಷ್ಟು ಸುಲಭವಾಗಿ ಪರಿಹಾರವಾಗುವುದಿಲ್ಲ‌. ಅಕ್ರಮಗಳ ರೂಪ ಬೇರೆಯಾಗಬಹುದು, ಆದರೆ ಬೇರೆ ಒಳದಾರಿಗಳ ಮುಖಾಂತರ ಅವರು ನುಸುಳುತ್ತಲೇ ಇರುತ್ತಾರೆ. ಆದ್ದರಿಂದ ಸಮಾಜದಲ್ಲಿ ನೈತಿಕ ಮೌಲ್ಯಗಳ ಪುನರ್ ಸ್ಥಾಪನೆ ಒಂದೇ ಇದಕ್ಕಿರುವ ಏಕೈಕ ಪರ್ಯಾಯ ಮಾರ್ಗ‌….

ಕೆಟ್ಟ ಹಣ, ಕೆಟ್ಟ ಅಧಿಕಾರ, ಕೆಟ್ಟ ಮಾರ್ಗಗಳನ್ನು ಕನಿಷ್ಠ ಯುವ ಜನತೆಯಾದರೂ ತಿರಸ್ಕರಿಸುವಂತಹ ಮನೋಭಾವವನ್ನು ಸೃಷ್ಠಿಸಬೇಕಿದೆ‌…….

ಇದು ಕಷ್ಟವಾದರೂ ಅಸಾಧ್ಯವಲ್ಲ. ಮಕ್ಕಳು ಬಿಳಿಯ ಹಾಳೆ ಇದ್ದಂತೆ. ಅದರ ಮೇಲೆ ಅತ್ಯುತ್ತಮ ಆದರ್ಶಗಳನ್ನು ಮೂಡಿಸುವ ಕೆಲಸ ಹಿರಿಯರದು. ಆ ನಿಟ್ಟಿನಲ್ಲಿ ಪ್ರಯತ್ನಗಳಾಗಲಿ, ಮಾನವೀಯ ಮೌಲ್ಯಗಳ ಶಿಕ್ಷಣಕ್ಕೆ ಅಡಿಪಾಯ ಈಗಿನಿಂದಲೇ ಪ್ರಾರಂಭವಾಗಲಿ ಎಂದು ಮನವಿ ಮಾಡಿಕೊಳ್ಳುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನ ಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್‌. ಕೆ

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

8 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

11 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

13 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

16 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

17 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago