ರಾಷ್ಟ್ರೀಯ ರೋಗ ನಿರೋಧಕ ದಿನ ಆಚರಣೆಯ ಅಂಗವಾಗಿ ನಡೆಯುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಶೇಕಡ 100 ರಷ್ಟು ಪ್ರಗತಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ 2024ನೇ ಸಾಲಿನ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 03 ರಿಂದ 06 ರ ವರೆಗೆ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ಕೈಗೊಂಡು ಸಂಬಂಧಪಟ್ಟ ಇಲಾಖೆಗಳ ಸಹಭಾಗಿತ್ವದಲ್ಲಿ ಶೇ100 ರಷ್ಟು ಪ್ರಗತಿ ಸಾಧಿಸಿ ಎಂದು ಹೇಳಿದರು.
ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಒತ್ತು ನೀಡಿ ಪ್ರತಿ ಮಗುವಿಗು ಲಸಿಕೆ ತಲುಪುವಂತೆ ಮಾಡಿ ಎಂದು ತಿಳಿಸಿದರು.
ಜಿಲ್ಲೆಯಲ್ಲಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಲಸಿಕೆಯನ್ನು ತಲುಪಿಸಲು ಕ್ರಮ ಕೈಗೊಳ್ಳಿ ಎಂದರು.
ಗ್ರಾಮ ಪಂಚಾಯತಿ, ನಗರಸಭೆ, ಪುರಸಭೆ, ವಿವಿಧ ಇಲಾಖೆಗಳನ್ನು ಒಳಗೊಂಡು ಲಸಿಕಾ ದಿನದ ಪ್ರಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.
ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಆಯುಷ್ ಇಲಾಖೆ ಅಧಿಕಾರಿ ಡಾ.ಸೀಮಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಲತ್ತಾರೆಡ್ಡಿ, ಎಸ್ಎಮ್ಒ ಡಾ.ನಾಗರಾಜ್ (WHO) ಸೇರಿದಂತೆ ಜಿಲ್ಲಾ ಮಟ್ಟದ ಕಾರ್ಯಕ್ರಮಾಧಿಕಾರಿಗಳು, ತಾಲ್ಲೂಕು ಮಟ್ಟದ ಅರೋಗ್ಯಾಧಿಕಾರಿಗಳು, ಆಶಾಕಾರ್ಯಕರ್ತರು ಕಾರ್ಯಕ್ರಮಮದಲ್ಲಿ ಉಪಸ್ಥಿತರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…