2024ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾರ್ಚ್ 03 ರಿಂದ 06 ರ ವರೆಗೆ ಯಶಸ್ವಿಯಾಗಿ ಜಾರಿಯಾಗಿದೆ. ಜಿಲ್ಲೆಯಲ್ಲಿ 0-5 ವರ್ಷದೊಳಗಿನ 1,00,105 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಇತ್ತು ಇದಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು 476 ಪೋಲಿಯೋ ಬೂತ್ಗಳನ್ನು ಹಾಗೂ 135 ಟ್ರಾನ್ಸಿಟ್ ತಂಡಗಳನ್ನು ರಚಿಸಿ ಜಿಲ್ಲೆಯಲ್ಲಿ ಒಟ್ಟು 1498 ಸೂಕ್ಷ್ಮ ಪ್ರದೇಶಗಳನ್ನು (ಹೆಚ್.ಆರ್.ಎ) ಆರೋಗ್ಯ ಇಲಾಖೆಯಿಂದ ಗುರುತಿಸಲಾಗಿತ್ತು.
ಎಲ್ಲಾ ಸರ್ಕಾರಿ ತಾಲ್ಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಮ್ಮ ಕ್ಲಿನಿಕ್ಗಳಲ್ಲಿ ಹಾಗೂ ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಲಭ್ಯವಾಗಿತ್ತು.
ಈ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಾರ್ಚ್ 3ರಿಂದ 6ರ ವರೆಗೆ ಒಟ್ಟು-1,11,020 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಜಿಲ್ಲೆಯಲ್ಲಿ ಶೇ.110.90 ರಷ್ಟು ಪ್ರಗತಿ ಸಾಧಿಸಲಾಗಿದೆ.