ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಸ್: ತಪ್ಪಿತಸ್ಥರ ವಿರುದ್ಧ ಕಾನೂನು‌ಕ್ರಮಕ್ಕೆ ಬಿಜೆಪಿ ಆಗ್ರಹ

ನಿನ್ನೆ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಹಿನ್ನೆಲೆ, ಘೋಷಣೆ ಕೂಗಿದವರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ದೇಶ ದ್ರೋಹ ಕೇಸ್ ದಾಖಲು ಮಾಡಬೇಕು ಎಂದು ಆಗ್ರಹಿಸಿ ನಗರದ ತಾಲ್ಲೂಕು ಕಚೇರಿ ವೃತ್ತದ ಬಳಿ ಬಿಜೆಪಿ ಮುಖಂಡರು ಪ್ರತಿಭಟಿಸಿ ನಂತರ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೇಶದ ಅಸ್ಮಿತೆ ಹಾಳು ಮಾಡುವುದಲ್ಲದೆ ದೇಶ ದ್ರೋಹಿ ಕೆಲಸ ಮಾಡಿದ ನಾಸಿರ್ ಅವರು ತಮ್ಮ ಬೆಂಬಲಿಗರನ್ನು ರಕ್ಷಿಸುವ ಬರದಲ್ಲಿ ಮಾಧ್ಯಮದವರನ್ನ ಹೇ ನಡಿಯೋ ನಡಿಯೋ ಎಂದು ಹೇಳುವ ಮೂಲಕ ಉದ್ಧಟತನ ಮೆರೆಯುವುದರ ಜೊತೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಒಬ್ಬ ಜನಪ್ರತಿನಿಧಿ ಈ ರೀತಿ ವರ್ತನೆ ತೋರಿರುವುದು ಅಕ್ಷಮ್ಯ ಅಪರಾಧ ಕೂಡಲೇ ಇದರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ನಗರ ಅಧ್ಯಕ್ಷರಾದ ಮುದ್ದಪ್ಪ, ತಾ.ಪ್ರ.ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ನ.ಪ್ರ.ಕಾರ್ಯದರ್ಶಿ ಮುನಿರಾಜು, ಸಂಚಾಲಕರಾದ ವೆಂಕಟರಾಜು, ನಿಕಟ ಪೂರ್ವ ಜಿ.ಪ್ರ.ಕಾರ್ಯದರ್ಶಿ ಗೋವಿಂದರಾಜ್, ನಿಕಟ ಪೂರ್ವ ರಾಜ್ಯ ಕಾರ್ಯದರ್ಶಿ ಬಿ.ಸಿ ನಾರಾಯಣಸ್ವಾಮಿ, ನಿಕಟ ಪೂರ್ವ ಮ.ಕಾರ್ಯದರ್ಶಿ ವತ್ಸಲಾ, ನಗರ ಸಭಾ ಸದಸ್ಯರುಗಳಾದ ಪದ್ಮನಾಭ್, ವತ್ಸಲಾ, ನಾಗರತ್ನಮ್ಮ ಕೃಷ್ಣಮೂರ್ತಿ, ಹಂಸಪ್ರೀಯ ದೇವರಾಜ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *