ರಸ್ತೆ ಪಕ್ಕದಲ್ಲಿ ನಡೆದು ಬರುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಕಾಡನೂರು ಕೈಮರ ಬಳಿ ನಡೆದಿದೆ.
ಗೌರಿಬಿದನೂರು ಮೂಲದ ಬಾಲರಾಜ್ (35), ಮೃತಪಟ್ಟಿರೋ ಪಾದಚಾರಿ. ನೆಲಮಂಗಲ ತಾಲೂಕಿನ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಮಂಜುನಾಥ್ ದ್ವಿಚಕ್ರ ವಾಹನದಲ್ಲಿ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.