ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬೀಗ ಹೊಡೆದು ಒಳಗೆ ಹೋಗಿ ಬೆಡ್ ರೂಮಿನ ಮರದ ಬೀರುವಿನಲ್ಲಿದ್ದ ಸುಮಾರು 7.5 ಗ್ರಾಂ ತೂಕದ ಸುಮಾರು 75000 ಬೆಲೆ ಬಾಳುವ ಒಂದು ಜೊತೆ ಚಿನ್ನದ ಓಲೆಗಳನ್ನು ಹಾಗೂ ರೂ 5000 ನಗದನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಳವು ಮಾಲನ್ನು ವಶಕ್ಕೆ ಪಡೆದು ದೂರುದಾರರಿಗೆ ವಾಪಸ್ ನೀಡಿದ್ದಾರೆ.
ಸೆ.21ರಂದು ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿಯ ಜೆಪಿನಗರದ ಸಿದ್ದರಾಮಯ್ಯ ಲೇಔಟ್ ನ ಮನೆಯಲ್ಲಿ ನಡೆದ ಕಳ್ಳತನ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ದೂರು ದಾಖಲಿಸಿಕೊಂಡ ಪೊಲೀಸರು, ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಚಂದ್ರಕಲಾ ಹಾಗೂ ಸಿಬ್ಬಂದಿಯವರಾದ ಸುನಿಲ್ ಬಾಸಗಿ, ಫೈರೋಜ್ ಕೆ, ಪ್ರವೀಣ್, ಸಚಿನ್ ಉಪ್ಪಾರ್, ಹರೀಶ್ ತಂಡವು ಕಳ್ಳರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಿದ್ದ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದು ದೂರುದಾರರಿಗೆ ವಾಪಸ್ ನೀಡಿದ್ದಾರೆ.
ವಿಪರ್ಯಾಸವೆಂದರೆ ದೊಡ್ಡಬಳ್ಳಾಪುರ ತಾಲೂಕಿನ ನಿಜಗಲ್ ಲೇಔಟ್, ನಂದಿನಿ ಲೇಔಟ್, ಟಿ.ಬಿ ನಾರಾಯಣಪ್ಪ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮನೆ ಕಳ್ಳತನಕ್ಕೆ ಇಳಿದಿದ್ದ ಪುರುಷೋತ್ತಮ, ಚಂದ್ರು, ದರ್ಶನ್, ಸೌಭಾಗ್ಯ ಎಂಬ ಆರೋಪಿಗಳೇ ಇಲ್ಲಿಯೂ ಸಹ ಕೈಚಳಕ ತೋರಿಸಿದ್ದಾರೆ ಎಂಬ ಮಾಹಿತಿ ತನಿಖೆಯಿಂದ ಬಯಲಿಗೆ ಬಂದಿದೆ…
ಕಳುವಾಗಿದ್ದ ವಸ್ತುಗಳನ್ನು ಮತ್ತೆ ವಾಪಸ್ ಪಡೆದ ದೂರುದಾರರು ನಿಟ್ಟುಸಿರು ಬಿಟ್ಟಿದ್ದಾರೆ. ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರು ಹಾಗೂ ದೂರುದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…