ಪಾಲನಜೋಗಿಹಳ್ಳಿ ಕೆರೆಯ ಭಾಗದಲ್ಲಿ ಸ್ವಚ್ಛತಾ ಕಾರ್ಯ

ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಮತ್ತು WWF ಸಂಸ್ಥೆಯ ಸಹಭಾಗಿತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಪಾಲನಜೋಗಿಹಳ್ಳಿ ಕೆರೆಯ ಭಾಗದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ಪಂಚಾಯಿತಿ ಅಧ್ಯಕ್ಷೆ ಅಶಾರಾಣಿ ನಾಗರಾಜ್ ಮಾತನಾಡಿ, ಹೆದ್ದಾರಿಯ ಪಕ್ಕದಲ್ಲೇ ಕೆರೆಕಟ್ಟೆ ಇರುವುದರಿಂದ ತ್ಯಾಜ್ಯ ವಸ್ತುಗಳನ್ನು ಹಾಕುವುದು ಹೆಚ್ಚಾಗಿದೆ, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಕೆರೆ ಅಂಗಳ ಕಲುಷಿತಗೊಳಿಸುವವರಿಗೆ ದಂಡ ವಿಧಿಸಲಾಗುವುದು ಎಚ್ಚರಿಕೆ ನೀಡಿದರು.

ಅರ್ಕಾವತಿ ನದಿ ಜಲಾನಯನ ಪ್ರದೇಶದಲ್ಲಿ ಈ ಕೆರೆ ಒಳಪಡುವುದರಿಂದ ಸ್ಥಳೀಯ ಸಾರ್ವಜನಿಕರು ಕೆರೆಯ ಸುತ್ತ ಮುತ್ತ ಕಲುಷಿತ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕುವುದು ತಪ್ಪಿಸಿದರೆ ಕೆರೆಯಲ್ಲಿನ ಜಲಚರಗಳು ಮತ್ತು ಪಕ್ಷಿಗಳು ಜೀವಿಸಲು ಅನುಕೂಲ ಮಾಡಿದಂತಾಗುತ್ತದೆ ಎಂದು ಕೆರೆಮಿತ್ರ ಜನಾರ್ದನ್ ತಿಳಿಸಿದರು.

ಸ್ವಚ್ಚತಾ ಕಾರ್ಯದಲ್ಲಿ ಪಂಚಾಯಿತಿ ಅಧಿಕಾರಿಗಳು, ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, WWF ಸಂಸ್ಥೆಯ ಶಶಿಕಲಾ ಐಯ್ಯರ್, ಡಾ. ಶಾಂತಾನು ಗುಪ್ತ, ಕಾರ್ತಿಕ್ ಗೌಡ ಮತ್ತು HSBC ಸಂಸ್ಥೆಯ ಸ್ವಯಂಸೇವಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

41 minutes ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

3 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

14 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

14 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

15 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

16 hours ago