ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಸುಮಾರು 9:15ರಲ್ಲಿ ಪಾಲನಜೋಗಿಹಳ್ಳಿ ಬಳಿ ನಡೆದಿದೆ..

ಹಿಂದೂಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ  ಕೆಎಸ್ ಆರ್ ಟಿಸಿ ಬಸ್ ಮುಂದೆ ಸಾಗುತ್ತಿದ್ದ ಬೈಕ್ ನ್ನು ಓವರ್ ಟೇಕ್ ಮಾಡುವ ಬರದಲ್ಲಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮೃತನನ್ನು ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29) ಎಂದು ಗುರುತಿಸಲಾಗಿದೆ..

ಬೈಕ್ ಸವಾರನ ತಲೆಗೆ ಪೆಟ್ಟಾಗಿ, ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ…

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಕೂಡಲೇ ಬಸ್ ಡ್ರೈವರ್ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ…

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…

Leave a Reply

Your email address will not be published. Required fields are marked *

error: Content is protected !!