ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಾಲೂಕಿನ ಪಾಲ್ ಪಾಲ್ ದಿನ್ನೆಯಲ್ಲಿ ಕೃಷಿ ಬೃಂದಾವನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದರ ಅಂಗವಾಗಿ ಬೆಳೆ ಕ್ಷೇತ್ರೋತ್ಸವ, ಕೃಷಿ ವಸ್ತು ಪ್ರದರ್ಶನ, ಕೃಷಿ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೃಷಿ ವಿದ್ಯಾರ್ಥಿಗಳು 3 ತಿಂಗಳಿಂದ ಹಳ್ಳಿಯಲ್ಲಿ ಬಿಡಾರ ಹೂಡಿದ್ದು, ರೈತರ ಮಾಹಿತಿ ಕಲೆ ಹಾಕಿ ಸಮಸ್ಯೆಗಳ ಪಟ್ಟಿ ಮಾಡಿ ಅದರ ಬಗ್ಗೆ ಹೊಸ ತಂತ್ರಜ್ಞಾನ, ತಾಂತ್ರಿಕ ಪ್ರಾತ್ಯಕ್ಷಿಕೆ ಜೊತೆ ಮಾಹಿತಿ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರೋತ್ಥಾನ ಗೋಶಾಲೆ ಮುಖ್ಯಸ್ಥ ಗವ್ಯ ಸಿದ್ಧ ವೈದ್ಯ ಡಾ.ಜೀವನ್ ಕುಮಾರ್, ಸಾವಯವ ಕೃಷಿಯ ಬಗ್ಗೆ ಇಂದು ಹೆಚ್ಚಿನ ಪ್ರಚಾರವಾಗಬೇಕಿದ್ದು, ಗೋವಿನ ಮಹತ್ವದ ಬಗ್ಗೆ ಅರಿಯಬೇಕಿದೆ. ಪುಸ್ತಕದ ಅರಿವಿಗಿಂತ ಪ್ರಾಯೋಗಿಕ ಅರಿವು ಮುಖ್ಯ ಎಂದು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಕೃಷಿ ಶಿಬಿರದ ಸಹ ಸಂಯೋಜಕ ಡಾ.ಪಂಕಜಾ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಉಮಾಬಾಯಿ, ಅಪ್ಪಯ್ಯಪ್ಪ, ವೆಂಕಟೇಶ್, ವಾಸುದೇವ, ರೈತ ಮಹಿಳೆ ರೂಪಾ ,ರೈತ ಮುಖಂಡ ನರಸಿಂಹ ಗೌಡ, ಸಂಪನ್ಮೂಲ ವಿಜ್ಞಾನಿಗಳಾದ ಲಕ್ಷ್ಮೀನಾರಾಯಣ ರೆಡ್ಡಿ , ಲಕ್ಷ್ಮೀಪತಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಭಾಗವಹಿಸಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…