ದೊಡ್ಡಬಳ್ಳಾಪುರ: ಪಿಎಲ್ ಡಿ (ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ನಾಗಮಣಿ ಅವರ ನೇತೃತ್ವದಲ್ಲಿ ಚುನಾವಣೆ ಇಂದು ನಡೆದಿದೆ.
ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರಾಜಘಟ್ಟ ಶಿವಣ್ಣ, ಉಪಾಧ್ಯಕ್ಷರಾಗಿ ಜೆಡಿಎಸ್‌ನ ಎಲ್.ಕೆ.ರಾಮಚಂದ್ರ ಬಾಬು (ಮಿಲ್ಕ್ ಬಾಬು)ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತಕ್ಕೆ ಫೆಬ್ರವರಿ 16 ರಿಂದ ಮುಂದಿನ 05 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆಸಲಾಗಿದೆ.
ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಮೂರು ಪಕ್ಷಗಳು ಮೈತ್ರಿ ಸಾಧಿಸಿ, ತಲಾ 20 ತಿಂಗಳ ಅಧಿಕಾರ ಹಂಚಿಕೆ ಮಾಡಿಕೊಂಡಿವೆ.
ಮೊದಲ ಅವಧಿಗೆ ಜೆಡಿಎಸ್, ಎರಡನೇ ಅವಧಿಗೆ ಬಿಜೆಪಿ ಹಾಗೂ ಮೂರನೇ ಅವಧಿಗೆ ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಜಿ ಲಕ್ಷ್ಮೀಪತಯ್ಯ, ಹಿರಿಯು ಮುಖಂಡರಾದ ಎ.ನರಸಿಂಹಯ್ಯ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಹುಸ್ಕೂರು ಆನಂದ್, ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್, ತೆಂಗು ನಾರು ಮಂಡಳಿಯ ರಾಜ್ಯಾಧ್ಯಕ್ಷ ಗಂಟಿಗಾನಹಳ್ಳಿ ಬಾಬು, ಜೆಡಿಎಸ್ ಮುಖಂಡ ಬಿ.ಎಸ್ ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.