Categories: ಕೋಲಾರ

ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಅಮರೇಶ್ ಅವಿರೋಧ ಆಯ್ಕೆ

ಕೋಲಾರ: ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ) ಬ್ಯಾಂಕ್ ಅಧ್ಯಕ್ಷರಾಗಿ ಹೊಳಲಿ ಹೊಸೂರು ಜಿ.ಅಮರೇಶ್ ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ನಗರದ ಬ್ಯಾಂಕ್ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಯಲವಾರ ಸೊಣ್ಣೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗಧಿಯಾಗಿತ್ತು 14 ನಿರ್ದೇಶಕರಿದ್ದು ಅಧ್ಯಕ್ಷ ಸ್ಥಾನಕ್ಕೆ ಟಿ.ಕೆ ಬೈರೇಗೌಡ, ಕೆ.ಸಿ ಮಂಜುನಾಥ್, ಹಾಗೂ ಜಿ ಅಮರೇಶ್ ಮೂವರು ನಾಮಪತ್ರ ಸಲ್ಲಿಸಿದರು ನಂತರ ಹಿರಿಯರು, ಹಾಗೂ ಜೆಡಿಎಸ್‌ ಮತ್ತು ಬಿಜೆಪಿ ಮುಖಂಡರು ಮನವೊಲಿಸಿ ಟಿ.ಕೆ ಬೈರೇಗೌಡ ಮತ್ತು ಕೆ.ಸಿ ಮಂಜುನಾಥ್ ಅವರ ನಾಮಪತ್ರ ವಾಪಸ್ಸು ಪಡೆದಿದ್ದರಿಂದ ಜಿ.ಅಮರೇಶ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿಯಾಗಿದ್ದ ಸಹಕಾರ ಸಂಘಗಳ ಜಂಟಿ ಇಲಾಖೆಯ ಗೀತಾ ಅವರು ಘೋಷಿಸಿದರು.

ನಂತರ ಮಾಧ್ಯಮರೊಂದಿಗೆ ನೂತನ ಅಧ್ಯಕ್ಷ ಜಿ ಅಮರೇಶ್ ಮಾತನಾಡಿದ ಸಂಘದ ಎಲ್ಲ ನಿರ್ದೇಶಕರು ಹಾಗೂ ಹಿರಿಯ ಮುಖಂಡರು ನನ್ನ ಮೇಲೆ ವಿಶ್ವಾಸವಿಟ್ಟು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಬ್ಯಾಂಕ್ ನ ಎಲ್ಲಾ ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಬ್ಯಾಂಕ್ ಅಭಿವೃದ್ಧಿ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಸಹಕಾರಿ ಸಂಸ್ಥೆಯಲ್ಲಿ ರಾಜಕಾರಣ ಮಾಡದೇ ಎಲ್ಲರ ಒಮ್ಮತದಿಂದ ಚುನಾವಣೆ ನಡೆಯದಂತೆ ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ ಎಲ್ಲರ ವಿಶ್ವಾಸದಿಂದ ಸಹಕಾರಿ ಸಂಸ್ಥೆಯನ್ನು ಮುನ್ನಡೆಸಬೇಕು ಸಂಸ್ಥೆಯಲ್ಲಿ ರಾಜಕೀಯದ ಹಸ್ತಕ್ಷೇಪ ಇಲ್ಲದೇ ಪ್ರಾಮಾಣಿಕತೆಯಿಂದ ರೈತರ ಅಭಿವೃದ್ಧಿಗೆ ಶ್ರಮಿಸಬೇಕು ತಮಗಿರುವ ನಾಲ್ಕು ತಿಂಗಳ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿನ ರೈತರ ಅಭಿವೃದ್ಧಿ ಮಾಡಲು ಅವಕಾಶ ಸಿಕ್ಕಿದೆ ಎಲ್ಲರ ಮಾರ್ಗದರ್ಶನದಲ್ಲಿ ರೈತರ ಏಳಿಗೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನೂತನ ಅಧ್ಯಕ್ಷರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಕೋಚಿಮುಲ್ ನಿರ್ದೇಶಕ ವಡಗೂರು ಡಿ.ವಿ ಹರೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷೆ ಸುನಂದಮ್ಮ, ನಿರ್ದೇಶಕರಾದ ಯಲವಾರ ಸೊಣ್ಣೇಗೌಡ, ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್, ವಿ.ಎ ಶಶಿಧರ್, ಹೆಚ್ ಕೃಷ್ಣೇಗೌಡ, ಮಂಜುನಾಥ್, ಬೈರೇಗೌಡ, ರಾಧಾಕೃಷ್ಣ, ಕೆ.ಸಿ ಮಂಜುನಾಥ್, ಗಂಗಪ್ಪ, ಶೋಭಾ, ಗೋವಿಂದಪ್ಪ, ಮುಖಂಡರಾದ ರಾಜು ಶ್ರೀನಿವಾಸಪ್ಪ, ಇರಗಸಂದ್ರ ವಿಶ್ವನಾಥ್, ಕೆಂಬೋಡಿ ನಾರಾಯಣಗೌಡ, ಸುಭಾಷ್, ಸೀಸಂದ್ರ ಬಾಬು, ಬ್ಯಾಂಕ್ ಸಿಇಒ ಶ್ರೀನಿವಾಸ್, ಲೆಕ್ಕಾಧಿಕಾರಿ ಶೋಭಾರಾಣಿ, ಸಿ.ಶ್ಯಾಮಲಾ ಮುಂತಾದವರು ಇದ್ದರು

Ramesh Babu

Journalist

Recent Posts

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

41 minutes ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

4 hours ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳಲ್ಲಿ ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

6 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

12 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

13 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

14 hours ago