ಕೋಲಾರ: ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ಡಿ) ಬ್ಯಾಂಕ್ ಅಧ್ಯಕ್ಷರಾಗಿ ಹೊಳಲಿ ಹೊಸೂರು ಜಿ.ಅಮರೇಶ್ ಗುರುವಾರ ಅವಿರೋಧವಾಗಿ ಆಯ್ಕೆಯಾದರು.
ನಗರದ ಬ್ಯಾಂಕ್ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಯಲವಾರ ಸೊಣ್ಣೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗಧಿಯಾಗಿತ್ತು 14 ನಿರ್ದೇಶಕರಿದ್ದು ಅಧ್ಯಕ್ಷ ಸ್ಥಾನಕ್ಕೆ ಟಿ.ಕೆ ಬೈರೇಗೌಡ, ಕೆ.ಸಿ ಮಂಜುನಾಥ್, ಹಾಗೂ ಜಿ ಅಮರೇಶ್ ಮೂವರು ನಾಮಪತ್ರ ಸಲ್ಲಿಸಿದರು ನಂತರ ಹಿರಿಯರು, ಹಾಗೂ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮನವೊಲಿಸಿ ಟಿ.ಕೆ ಬೈರೇಗೌಡ ಮತ್ತು ಕೆ.ಸಿ ಮಂಜುನಾಥ್ ಅವರ ನಾಮಪತ್ರ ವಾಪಸ್ಸು ಪಡೆದಿದ್ದರಿಂದ ಜಿ.ಅಮರೇಶ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿಯಾಗಿದ್ದ ಸಹಕಾರ ಸಂಘಗಳ ಜಂಟಿ ಇಲಾಖೆಯ ಗೀತಾ ಅವರು ಘೋಷಿಸಿದರು.
ನಂತರ ಮಾಧ್ಯಮರೊಂದಿಗೆ ನೂತನ ಅಧ್ಯಕ್ಷ ಜಿ ಅಮರೇಶ್ ಮಾತನಾಡಿದ ಸಂಘದ ಎಲ್ಲ ನಿರ್ದೇಶಕರು ಹಾಗೂ ಹಿರಿಯ ಮುಖಂಡರು ನನ್ನ ಮೇಲೆ ವಿಶ್ವಾಸವಿಟ್ಟು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದೇನೆ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಬ್ಯಾಂಕ್ ನ ಎಲ್ಲಾ ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಬ್ಯಾಂಕ್ ಅಭಿವೃದ್ಧಿ ಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಸಹಕಾರಿ ಸಂಸ್ಥೆಯಲ್ಲಿ ರಾಜಕಾರಣ ಮಾಡದೇ ಎಲ್ಲರ ಒಮ್ಮತದಿಂದ ಚುನಾವಣೆ ನಡೆಯದಂತೆ ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ ಎಲ್ಲರ ವಿಶ್ವಾಸದಿಂದ ಸಹಕಾರಿ ಸಂಸ್ಥೆಯನ್ನು ಮುನ್ನಡೆಸಬೇಕು ಸಂಸ್ಥೆಯಲ್ಲಿ ರಾಜಕೀಯದ ಹಸ್ತಕ್ಷೇಪ ಇಲ್ಲದೇ ಪ್ರಾಮಾಣಿಕತೆಯಿಂದ ರೈತರ ಅಭಿವೃದ್ಧಿಗೆ ಶ್ರಮಿಸಬೇಕು ತಮಗಿರುವ ನಾಲ್ಕು ತಿಂಗಳ ಅವಧಿಯಲ್ಲಿ ಗ್ರಾಮೀಣ ಭಾಗದಲ್ಲಿನ ರೈತರ ಅಭಿವೃದ್ಧಿ ಮಾಡಲು ಅವಕಾಶ ಸಿಕ್ಕಿದೆ ಎಲ್ಲರ ಮಾರ್ಗದರ್ಶನದಲ್ಲಿ ರೈತರ ಏಳಿಗೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನೂತನ ಅಧ್ಯಕ್ಷರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಕೋಚಿಮುಲ್ ನಿರ್ದೇಶಕ ವಡಗೂರು ಡಿ.ವಿ ಹರೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷೆ ಸುನಂದಮ್ಮ, ನಿರ್ದೇಶಕರಾದ ಯಲವಾರ ಸೊಣ್ಣೇಗೌಡ, ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್, ವಿ.ಎ ಶಶಿಧರ್, ಹೆಚ್ ಕೃಷ್ಣೇಗೌಡ, ಮಂಜುನಾಥ್, ಬೈರೇಗೌಡ, ರಾಧಾಕೃಷ್ಣ, ಕೆ.ಸಿ ಮಂಜುನಾಥ್, ಗಂಗಪ್ಪ, ಶೋಭಾ, ಗೋವಿಂದಪ್ಪ, ಮುಖಂಡರಾದ ರಾಜು ಶ್ರೀನಿವಾಸಪ್ಪ, ಇರಗಸಂದ್ರ ವಿಶ್ವನಾಥ್, ಕೆಂಬೋಡಿ ನಾರಾಯಣಗೌಡ, ಸುಭಾಷ್, ಸೀಸಂದ್ರ ಬಾಬು, ಬ್ಯಾಂಕ್ ಸಿಇಒ ಶ್ರೀನಿವಾಸ್, ಲೆಕ್ಕಾಧಿಕಾರಿ ಶೋಭಾರಾಣಿ, ಸಿ.ಶ್ಯಾಮಲಾ ಮುಂತಾದವರು ಇದ್ದರು
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…