ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದಿಂದ ಬಳಲುತ್ತಿದ್ದ 93 ವರ್ಷದ ಇಳಿವಯಸ್ಸಿನ ವ್ಯಕ್ತಿಗೆ ರೋಬೋಟ್ ನೆರವಿನ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸುಧಾರಿತ ರೋಬೋಟ್ ನೆರವಿನ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು.

ಫೋರ್ಟಿಸ್ ಆಸ್ಪತ್ರೆಯ ಮಿನಿಮಲ್ ಆಕ್ಸೆಸ್ ಮತ್ತು ರೊಬೊಟಿಕ್ ಜನರಲ್ ಸರ್ಜರಿ ನಿರ್ದೇಶಕ ಡಾ. ಶ್ರೀಧರ ವಿ ಮಾತನಾಡಿ, 93 ವರ್ಷದ ಸೋಮೇಶ್ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು 4-6 ದಿನಗಳಿಂದ ತೀವ್ರ ಹೊಟ್ಟೆ ನೋವು ಅನುಭವಿಸುತ್ತಿದ್ದರು. ಸಾಕಷ್ಟು ಕಡೆ ತೋರಿಸಿದರೂ ಸೂಕ್ತ ಕಾರಣ ತಿಳಿದಿರಲಿಲ್ಲ. ಬಳಿಕ ಅವರು ಫೋರ್ಟಿಸ್‌ಗೆ ದಾಖಲಾದರು. ಅವರನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ ಬಳಿಕ ಅವರಿಗೆ ಪಿತ್ತಕಲ್ಲುಗಳೊಂದಿಗೆ ಸೋಂಕಿತ ಪಿತ್ತಕೋಶ ಇರುವುದು ಕಂಡು ಬಂತು. ಅಷ್ಟೇ ಅಲ್ಲದೆ, ರೋಗಿಯು ಈ ಮೊದಲೇ ಹೃದ್ರೋಗ, ಮಧುಮೇಹ, ಅಧಿಕ ರಕ್ತದೊತ್ತಡದ ಇತಿಹಾಸ ಹೊಂದಿದ್ದು, ಈ ಹಿಂದೆ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆ ಮತ್ತು ಆಂಜಿಯೋಪ್ಲ್ಯಾಸ್ಟಿಗೆ ಒಳಪಟ್ಟಿದ್ದರು.

ಈ ಎಲ್ಲಾ ಕಾರಣದಿಂದ ಹಾಗೂ ಅವರ ವಯಸ್ಸಿನ ಕಾರಣದಿಂದ ಅವರಿಗೆ ಓಪನ್‌ ಸರ್ಜರಿ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ ಅವರಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಮಾಡಲು ನಿರ್ಧರಿಸಿದೆವು, ಇದು ಸುಧಾರಿತ ಕನಿಷ್ಠ ಆಕ್ರಮಣಶೀಲ ತಂತ್ರವಾಗಿದ್ದು, ನಿಖರವಅಗಿ ಶಸ್ತ್ರಚಿಕಿತ್ಸೆ ನಡೆಸಲು ಹಾಗೂ ತ್ವರಿತವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಕೇವಲ 20 ರಿಂದ 30 ನಿಮಿಷಗಳಲ್ಲೇ ಸೂಕ್ತ ರೀತಿಯಲ್ಲಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಈ ಶಸ್ತ್ರಚಿಕಿತ್ಸೆಯು ಅನೇಕ ವೈದ್ಯಕೀಯ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸುವಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆ ಅತ್ಯಧುತ ವರವೆಂದು ಹೇಳಿದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 minutes ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

14 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

19 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

23 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago