ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಿದ್ದ ಕಳ್ಳರ ಗ್ಯಾಂಗ್: ಚಿನ್ನ ಕದ್ದು ರಾಜಸ್ತಾನಕ್ಕೆ ಪರಾರಿ: ಕಳ್ಳರನ್ನು ಬಂಧಿಸಿದ ಮಾದನಾಯಕನಹಳ್ಳಿ ಪೋಲಿಸರು: ಬಂಧಿತರಿಂದ 35 ಲಕ್ಷ ರೂ. ಮೌಲ್ಯದ‌ 417 ಗ್ರಾಂ ಚಿನ್ನಾಭರಣ, ಪಿಸ್ತೂಲ್, ಡ್ರಾಗರ್, ಒಂದು ಬೈಕ್, ಆಟೋ ವಶ

ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಿದ್ದ 6 ಮಂದಿ ಕುಖ್ಯಾತ ಕಳ್ಳರನ್ನು ಮಾದನಾಯಕನಹಳ್ಳಿ ಪೋಲಿಸರು ಬಂಧಿಸಿದ್ದಾರೆ.

ನಾರಾಯಣ ಲಾಲ್, ರಾಮ್ ಲಾಲ್, ಕಿಶೋರ್ ಪವಾರ್, ಮಹೇಂದ್ರ ಗೆಹ್ಲೋಟ್, ಕೀರ್ತರಾಮ್, ಅಶೋಕ್ ಕುಮಾರ್, ಸೋಹನ್ ರಾಮ್ ಬಂಧಿತ ಆರೋಪಿಗಳು

ಬಂಧಿತರಿಂದ 35 ಲಕ್ಷ ರೂಪಾಯಿ ಮೌಲ್ಯದ‌ 417 ಗ್ರಾಂ ಚಿನ್ನಾಭರಣ, ಪಿಸ್ತೂಲ್, ಡ್ರಾಗರ್, ಒಂದು ಬೈಕ್, ಆಟೋ ವಶಕ್ಕೆ ಪಡೆಯಲಾಗಿದೆ.

ಈ ಕಳ್ಳರ ಗ್ಯಾಂಗ್ ಕಳೆದ ಒಂದು ತಿಂಗಳ ಹಿಂದೆ ಮಾದನಾಯಕನಹಳ್ಳಿಯ ದೊಂಬರಹಳ್ಳಿ ಬಳಿ ಇರುವ ಪದಮ್ ಜ್ಯೂವಲೆರಿ ಅಂಗಡಿಗೆ ನುಗ್ಗಿ ಪಿಸ್ತೂಲ್ ತೋರಿಸಿ ಚಿನ್ನ ಕದ್ದು ಪರಾರಿಯಾಗಿದ್ದರು.

ಈ ಆರೋಪಿಗಳ ತಂಡವು ದರೋಡೆ ಮಾಡಿ ರಾಜಸ್ಥಾನದಲ್ಲಿ ತಲೆಮರಿಸಿಕೊಂಡಿತ್ತು. ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೋಲಿಸರು ರಾಜಸ್ಥಾನಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago