ಕೇಂದ್ರ ಸರ್ಕಾರವು ವಿವಿಧ ಹಿಂದುಳಿದ ಮತ್ತು ಅಂಚಿನಲ್ಲಿರುವ ಗುಂಪುಗಳ ಫಲಾನುಭವಿಗಳಿಗಾಗಿ ವಿವಿಧ ರೀತಿಯ ಸಾಲ ಸೌಲಭ್ಯವನ್ನು ಪಡೆಯಲು ಅನುವಾಗುವಂತೆ ಪಿ.ಎಂ. ಸೂರಜ್ ಪೋರ್ಟಲ್ ನ್ನು ವಿನ್ಯಾಸಗೊಳಿಸಲಾಗಿದ್ದು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿಯ ಜನತೆಯು ಈ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ, ವಿವಿಧ ಸಾಲ ಸೌಲಭ್ಯವನ್ನು ಪಡೆದು, ಸಬಲೀಕರಣಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಕೆ.ಮಧುಕರ್ ಅವರು ಕರೆ ನೀಡಿದರು.
ಪಿ.ಎಂ. ಸೂರಜ್ ಪೋರ್ಟಲ್ ಮೂಲಕ ಉದ್ಯಮಿಗಳಿಗೆ ಆತ್ಮನಿರ್ಭರ್ ಮತ್ತು ಸ್ವಾವಲಂಬಿಯಾಗಲು ಅನುಕರಣೀಯ. ಸಾಲದ ಬೆಂಬಲವನ್ನು ಒದಗಿಸಲಾಗುತ್ತಿದೆ. ಉದಯೋನ್ಮುಖ ಉದ್ಯಮಿಗಳಿಗೆ ತಡೆರಹಿತ ಕ್ರೆಡಿಟ್ ಬೆಂಬಲವನ್ನು ವೆಬ್ ಸೇವೆಯ ಪ್ರಾರಂಭದ ಮೂಲಕ ಒದಗಿಸಲಾಗುವುದು ಎಂದರಲ್ಲದೆ, ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲು ಮತ್ತು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದರು.
ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಮಾತನಾಡಿ ನಿಗಮ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಿಂದ ಕೇಂದ್ರ ಸರಕಾರದ ಯೋಜನೆಗಳಡಿ ಸೌಲಭ್ಯ ಪಡೆದ ವಿವಿಧ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರವನ್ನು ಸಹ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕರಾದ ಶ್ರೀನಿವಾಸಲು, ರಾಷ್ಟ್ರೀಯ ಮಾಹಿತಿ ಕೇಂದ್ರದ ಮಾಹಿತಿ ಅಧಿಕಾರಿ ಗೌರಿಶಂಕರ್, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ್, ವಿವಿಧ ಬ್ಯಾಂಕುಗಳ ಶಾಖಾ ಪ್ರಬಂಧಕರು, ಫಲಾನುಭವಿಗಳು, ರುಡ್‌ಸೆಟ್ ಸಂಸ್ಥೆಯ ಶಿಬಿರಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…