ಪಿ.ಒ.ಪಿ ಗಣೇಶ ವಿಗ್ರಹ ಮಾರಾಟ-ಬಳಕೆ ನಿಷೇಧ-ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಪರಿಸರ ಮಾಲಿನ್ಯ ಉಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಗೌರಿ-ಗಣೇಶ ಹಬ್ಬ ಆಚರಿಸುವ ಸಂಬಂಧ ಪಿ.ಒ.ಪಿ ಗಣೇಶ ನಿಷೇಧಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣೇಶ ವಿಗ್ರಹಗಳು ಈಗಾಗಲೇ ಮಾರುಕಟ್ಟೆ ಪ್ರವೇಶಿಸಿದ್ದು, ಕೃತಕ ವಿಷಪೂರಿತ ಬಣ್ಣ ಬಳಕೆ, ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ಬಳಸಿ ಗಣೇಶ ವಿಗ್ರಹಗಳು ತಯಾರಿಸಿರುತ್ತಾರೆ. ಅಂತಹ ಗಣೇಶ ವಿಗ್ರಹಗಳನ್ನು ಬಳಸುವುದರಿಂದ ಪರಿಸರ ಮಾಲಿನ್ಯವಾಗುತ್ತದೆ. ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ, ಪರಿಶೀಲನೆ ನಡೆಸಿ ಮಾಲಿನ್ಯಕಾರಕ ಪಿ.ಒ.ಪಿ ಗಣೇಶ ಕಂಡುಬಂದಲ್ಲಿ ವಶ ಪಡಿಸಿಕೊಂಡು ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ಕೂಡ ರಾಸಾಯನಿಕ ಬಣ್ಣ ಲೇಪಿತ ಪಿ.ಒ.ಪಿ ಗಣೇಶ ಮೂರ್ತಿಗಳನ್ನು ಬಳಸಬಾರದು. ಗಣೇಶ ಮೂರ್ತಿಯನ್ನು ಕೂರಿಸುವಾಗ ಪರಿಸರ ಸ್ನೇಹಿ ಜೇಡಿಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಿ. ಗಣೇಶ ವಿಗ್ರಹಗಳನ್ನು ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವಾಗ ಸೂಕ್ತ ಮುಂಜಾಗ್ರತಾ ಅಗತ್ಯ. ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ವಿಸರ್ಜಿಸುವುದು ಉತ್ತಮ. ಯಾವುದೇ ಅನಾಹುತ-ಹಾನಿ ಸಂಭವಿಸದಂತೆ ಕ್ರಮ ವಹಿಸಿ. ಪಿ.ಒ.ಪಿ ಮೂರ್ತಿಗಳು ನೀರಿನಲ್ಲಿ ಕರಗುವುದಿಲ್ಲ. ರಾಸಾಯನಿಕ ಬಣ್ಣಗಳು ನೀರಿನಲ್ಲಿ ಕಲುಷಿತಗೊಂಡು ಜೀವ ಸಂಕುಲಕ್ಕೆ ಹಾನಿಯಾಗುತ್ತದೆ. ಹಾಗಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಇಡಲು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ಮೂರ್ತಿಗಳ ತಯಾರಿ ಕಂಡು ಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ.
ಸಾರ್ವಜನಿಕರು ಹಬ್ಬವನ್ನು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಜಾಗೃತಿ ವಹಿಸಿ, ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿಯಾಗಿ ಆಚರಿಸಿ ಎಂದು ಹೇಳಿದರು.

ಸಭೆಯಲ್ಲಿ ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗರಾಜ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ತಹಶೀಲ್ದಾರ್ ಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರ ಕೋರ್ಟ್ ಗೆ ಶರಣು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…

33 minutes ago

ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…

4 hours ago

ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ಸಿಎಂ ಸಭೆ: ಸಭೆಯ ಪ್ರಮುಖಾಂಶಗಳು ಇಲ್ಲಿವೆ ಓದಿ…

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…

16 hours ago

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

1 day ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

1 day ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago