ಪೀಕ್ ಅವರ್ ನಲ್ಲಿ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ವೃತ್ತದಲ್ಲಿ ಸಂಚಾರ ದಟ್ಟಣೆ: ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮನವಿ

ನಗರದ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ಬಳಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಧೀರಜ್‌ ಮುನಿರಾಜ್ ಹಾಗೂ ಡಿವೈಎಸ್ಪಿ ನಾಗರಾಜ್, ನಗರಸಭೆ ಪೌರಾಯುಕ್ತ ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿದ ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ನಗರದ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಕೆಲಸಕ್ಕೆಂದು ವಿವಿಧ ಜಿಲ್ಲೆ, ತಾಲೂಕಿನಿಂದ ಪ್ರತಿನಿತ್ಯ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ, ನೂರಾರು ಮಂದಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವಿವಿಧ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ರೈಲ್ವೆ ನಿಲ್ದಾಣ ಬಳಸಿ ಹೋಗುತ್ತಾರೆ ಇದರಿಂದ ವಾಹನ ದಟ್ಟಣೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಯಾವ ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಇಲ್ಲದೆ ವಾಹನ ಸವಾರರು, ಪ್ರಯಾಣಿಕರು, ನಗರ ನಿವಾಸಿಗಳು ನಿತ್ಯ ಪರದಾಡುವಂತಾಗಿದೆ. ಅದೇರೀತಿ ಅಪಘಾತ ಪ್ರಕರಣಗಳು ಇಲ್ಲಿ ಹೆಚ್ಚಾಗಿವೆ. ಆದ್ದರಿಂದ ಇಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ ಅಪಘಾತ ತಪ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ನಂತರ ಮಾತನಾಡಿದ ಉಪಾಧ್ಯಕ್ಷ ವಿನಯ್ ಮಾತನಾಡಿ, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾತ್ರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ. ಬೇರೆಲ್ಲೂ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಿಲ್ಲ, ರೈಲ್ವೆ‌ನಿಲ್ದಾಣ, ಡಿಕ್ರಾಸ್ ನಲ್ಲೂ ಹೆಚ್ಚು ಅಪಘಾತ, ವಾಹನ ದಟ್ಟಣೆ ಉಂಟಾಗುತ್ತವೆ ಅಲ್ಲಿಯೂ ಸಹ ಟ್ರಾಫಿಕ್ ಸಿಗ್ನಲ್ ಅತ್ಯವಶ್ಯಕ, ಜೊತೆಗೆ ಸಿಸಿಟಿವಿ ಅಳವಡಿಕೆ, ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಬೇಕು. ಎಲ್ಲರ ಜೀವ ಮತ್ತು ಸಮಯ ಅತ್ಯಮೂಲ್ಯ. ಆದ್ದರಿಂದ ಎಲ್ಲರ ಜೀವ ಮತ್ತು ಸಮಯ ಕಾಪಾಡುವ ಸಲುವಾಗಿ ಸಂಚಾರ ನಿಯಮಗಳನ್ನು ಅಳವಡಿಸಿ ಪಾಲನೆ ಮಾಡುವಂತೆ ಮಾಡುವುದು ಸಂಬಂಧಪಟ್ಟ ಇಲಾಖೆಗಳ ಕರ್ತವ್ಯ ಎಂದು ತಿಳಿಸಿದರು.

ನಮ್ಮ ಮನವಿಗೆ ಸ್ಪಂದಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ಸಹ ನೀಡಿದರು.

Ramesh Babu

Journalist

Recent Posts

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

1 hour ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

14 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

21 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

23 hours ago