ಪುಟ್ಟಲಿಂಗಯ್ಯನ ಪಾಳ್ಯದಲ್ಲಿ ಪ್ರತಿಭಾ ಕಾರಂಜಿ: ಪ್ರತಿಭಾ ಕಾರಂಜಿ ಕಾರ್ಯಕ್ರಮವು ಮಕ್ಕಳ ಪ್ರತಿಭೆಗಳನ್ನು ಅನಾವರಣ ಮಾಡುವ ವೇದಿಕೆ- ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್

ಪ್ರತಿಭಾ ಕಾರಂಜಿ ಕಾರ್ಯಕ್ರಮವು ಮಕ್ಕಳ ಪ್ರತಿಭೆಗಳನ್ನು ಅನಾವರಣ ಮಾಡುವ ವೇದಿಕೆಯಾಗಿದ್ದು, ಈ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ಮಕ್ಕಳಲ್ಲಿ ಕ್ರೀಡೆ, ಕಲೆ, ಸಾಹಿತ್ಯಗಳಲ್ಲಿ ಅಭಿವೃದ್ದಿ ಹೊಂದಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್ ತಿಳಿಸಿದರು.

ತಾಲ್ಲೂಕಿನ ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಸಲು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ದೀಪಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಗಾಯನ, ನೃತ್ಯ , ಏಕಪಾತ್ರಾಭಿನಯ, ನಾಟಕ, ಚರ್ಚಾ ಸ್ಪರ್ಧೆ, ಜಾನಪದ ನೃತ್ಯ, ಭಾವಗೀತೆ, ,ಪ್ರಬಂಧ ಸ್ಪರ್ಧೆ, ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಗಳ ಪ್ರದರ್ಶನ ಮಾಡಿದರು.

ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ  ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ ರವಿಕುಮಾರ್, ಪ್ರತಿಭಾಕಾರಂಜಿಯ ಅಧ್ಯಕ್ಷರಾದ ರಾಮಚಂದ್ರಯ್ಯ ವಿ, ಇಸಿಒಗಳಾದ ಭೀಮರಾಜ್ ಮತ್ತು ಜಯಶ್ರೀ ಕೆ.ಜೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ದೇವರಾಜ್ , ದೊಡ್ಡಬಳ್ಳಾಪುರ ಶಿಕ್ಷಕರ ಸಂಘದ ಪದಾಧಿಕಾರಿಗಳು, ಮತ್ತು ಪುಟ್ಟಲಿಂಗಯ್ಯನಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಸಾಸಲು ಕ್ಲಸ್ಟರ್ ಹಂತದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

8 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago