
ಕೋಲಾರ: ಮಹಾರಾಷ್ಟ್ರದ ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ಖಂಡನೀಯವಾಗಿದ್ದು ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಆರೋಪಿ ದತ್ತಾತ್ರೇಯ ರಾಮ್ ದಾಸ್ ಎಂಬ ವ್ಯಕ್ತಿ ಅತ್ಯಾಚಾರದ ಮಾಡಿದ್ದು ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ಅಲ್ಲಿನ ಸರ್ಕಾರಗಳು ಬಂದಿವೆ ಎಂದರೆ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ ಬಸ್ ನಿಲ್ದಾಣದಲ್ಲಿಯೇ ಅತ್ಯಾಚಾರ ಘಟನೆ ನಡೆದಿದ್ದು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ಮಹಿಳೆಯರಿಗೆ ಧೈರ್ಯ ತುಂಬುವಂತಾಗಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿಯು ಸಹ ಇಂತಹ ಘಟನೆಗಳು ನಡೆಯದ ರೀತಿ ಸರ್ಕಾರ, ಪೋಲಿಸ್ ಇಲಾಖೆ, ಹಾಗೂ ಕೆ.ಎಸ್.ಆರ್.ಟಿ.ಸಿ ಆಯುಕ್ತರು ಕ್ರಮ ವಹಿಸಬೇಕು ಹಾಗೂ ಮಹಿಳೆಯರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಬೇಕು ಮಹಿಳೆಯರ ಮೇಲೆ ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ಎಲ್ಲಿಯೂ ನಡೆಯದಂತೆ ಸೂಕ್ತ ಕ್ರಮ ವಹಿಸುವ ಜೊತೆಗೆ ಸಮಾಜಕ್ಕೆ ಒಂದು ಎಚ್ಚರಿಕೆಯ ಸಂದೇಶವನ್ನು ನೀಡುವಂತೆ ಯುವ ಕಾಂಗ್ರೆಸ್ ಸೈಯದ್ ಆಫ್ರೀದ್ ಒತ್ತಾಯಿಸಿದರು.