ಪುಣ್ಯಕ್ಷೇತ್ರ ಘಾಟಿಯಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಅದ್ಧೂರಿ ತೆಪೋತ್ಸವ

ತಾಲೂಕಿನ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿಯಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ತೆಪೋತ್ಸವ ಕಾರ‍್ಯಕ್ರಮ ಭಾನುವಾರ ರಾತ್ರಿ ಬಹಳ ವಿಜೃಂಭಣೆಯಿಂದ ನೆರವೇರಿತು.

ತುಳು ಷಷ್ಠಿಯಂದು ಬ್ರಹ್ಮರಥೊತ್ಸವ ಮುಗಿದ ಒಂದು ತಿಂಗಳಿಗೆ ಬರುವ ಮಾಘ ಶುದ್ದ ಪಂಚಮಿಯಂದು ನಡೆಯುವ ಈ ತೆಪ್ಪೋತ್ಸವ, ದೇವಾಲಯದ ಹೊರಭಾಗದಲ್ಲಿರುವ ಕಲ್ಯಾಣಿಯಲ್ಲಿ ಜಗಮಗಿಸುವ ವಿದ್ಯುತ್‌ ಹಾಗೂ ಹೂವಿನ ಅಲಂಕೃತ ತೆಪ್ಪದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಉತ್ಸವ ಮೂರ್ತಿಯನ್ನಿಟ್ಟು, ವೇದ ಮಂತ್ರ ಘೋಷಗಳಿಂದ ಪೂಜೆ ಸಲ್ಲಿಸಲಾಯಿತು, ತೆಪ್ಪದ ಮೇಲೆ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಅದ್ಧೂರಿಯಾಗಿ ಮಾಡಲಾಯಿತು.

ಕಲ್ಯಾಣಿಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ತೆಪ್ಪೋತ್ಸವ ಪ್ರಯುಕ್ತ ಭರತ ನಾಟ್ಯ, ಸುಗಮ ಸಂಗೀತ ಕಾರ್ಯಕ್ರಮ ನಡೆದವು.

ತೆಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾಧಿಗಳು‌ ಪಾಲ್ಗೊಂಡು, ಭವ್ಯವಾದ ತೆಪೋತ್ಸವವನ್ನು ಕಣ್ತುಂಬಿಕೊಂಡು ಆನಂದಪಟ್ಟರು.

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

22 minutes ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

50 minutes ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

16 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

20 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

20 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago