ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೀರೂರು ಪಟ್ಟಣದಲ್ಲಿ ಭಾವಸಾರ ಸಮಾಜದ ವಿಶ್ವನಾಥ ಎಂಬುವವರು ನಿಧನರಾಗಿದ್ದರು. ಮೃತ ವಿಶ್ವನಾಥ್ ಅವರಿಗೆ ಮಕ್ಕಳೇ ಇರಲಿಲ್ಲ. ಅವರ ಸಹೋದರರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಹೀಗಾಗಿ ಮೃತ ವಿಶ್ವನಾಥ್ ಸಹೋದರನ ಮಗಳು ಐಶ್ವರ್ಯ ಅವರೂ ನನ್ನ ತಂದೆ. ಅದಕ್ಕೆ ಅವರ ಅಂತ್ಯಸಂಸ್ಕಾರದ ಅಂತಿಮ ವಿಧಿ-ವಿಧಾನವನ್ನ ತಾನೇ ಮಾಡೋದಾಗಿ ಕುಟುಂಬದವರಿಗೆ ತಿಳಿಸಿದ್ದಳು. ಕುಟುಂಬ ಹಾಗೂ ಭಾವಸಾರ ಸಮಾಜದ ಎಲ್ಲಾ ಮುಖಂಡರು ಒಪ್ಪಿಗೆ ನೀಡಿದರು.
ಅದರಂತೆ ಸಹೋದರಿ ಭಾವನಳನ್ನೂ ಜೊತೆ ಸೇರಿಸಿಕೊಂಡು ಶುಕ್ರವಾರ (ಮಾ.13) ಅಂತ್ಯಕ್ರಿಯೆ ನಡೆಸಿಕೊಟ್ಟಿದ್ದಾರೆ. ಹೆಗಲ ಮೇಲೆ ಕುಡಿಕೆ ಹೊತ್ತು ಮೃತದೇಹದ ಸುತ್ತ ಮೂರು ಸುತ್ತು ಹಾಕಿ ತಂದೆ (ಚಿಕ್ಕಪ್ಪ) ಅಂತ್ಯಕ್ರಿಯೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…