ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡು ಟ್ಯಾಂಕರ್‌ಗಳಿಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಹಾಲಿನ ಟ್ಯಾಂಕರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ವಾಹನ ಸಂಪೂರ್ಣವಾಗಿ ಜ್ವಾಲೆಗಳಿಗೆ ಆಹುತಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನೆಲಮಂಗಲ-ದೊಡ್ಡಬಳ್ಳಾಪುರ ಮುಖ್ಯ ರಸ್ತೆಯಲ್ಲಿ ಪದೇ ಪದೇ ಇಂತಹ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಅತೀವೇಗವೇ ಅಪಘಾತಗಳಿಗೆ ಕಾರಣಗಳು. ಅಪಘಾತ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…