ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ – ಸಿಎಂ ಸಿದ್ದರಾಮಯ್ಯ

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ‌ ಹೇಳಿದರು.

ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರಲ್ ಕಚ್ಚಾತೈಲಕ್ಕೆ 120 ಡಾಲರ್ ಇತ್ತು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇತ್ತು, ಇಂದು 800 ರೂ. ಮೀರಿದೆ. ಪೆಟ್ರೋಲ್ – ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ ಎಂದು‌ ತಿಳಿಸಿದ್ದಾರೆ.

ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪ ಅವರಿಗೇ ನಾಚಿಕೆಗೇಡಿನದು. ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದಾರೆ ಎಂದರು.

ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಮ್ಮ ಅವಧಿಯಲ್ಲಿ ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಾಗಿದೆ. ಇದು ಸರ್ಕಾರವೊಂದರ ಆರ್ಥಿಕ ದಿವಾಳಿತನವೇ? ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ? ಎಂದು ಪ್ರಶ್ನೆ ಮಾಡಿದರು.

ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಸರ್ಕಾರವಾಗಿ ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆದಿಲ್ಲ, ಹಲವು ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ ಅನಿವಾರ್ಯತೆಯಿತ್ತು ಎಂದರು.

ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿ ಆರೋಪ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರದಿಂದ ಕೂಡಿದೆ. ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದು ಹೇಳಿದರು.

ಒಳಮೀಸಲಾತಿ ಜಾರಿಗೆ ತರಲು ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ನಮ್ಮ ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಅದೇ ರೀತಿ ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಾಣ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದರು.

Ramesh Babu

Journalist

Recent Posts

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

58 minutes ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

2 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

4 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

4 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

5 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

7 hours ago