ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ದೊಡ್ಡಬಳ್ಳಾಪುರ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ಹಳೇ ಬಸ್ ನಿಲ್ದಾಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿ ವೃತ್ತದವರೆಗೆ ಸಾಗಿತು.
ಬಳಿಕ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನಾಕಾರರು ಸೌದೆ ಒಲೆಯಲ್ಲಿ ಟೀ ತಯಾರಿಸಿ ಕುಡಿಯುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಅವೈಜ್ಞಾನಿಕ ನೀತಿಗಳ ಪರಿಣಾಮವಾಗಿ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜೊತೆಗೆ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಲಕ್ಷ್ಮಿಪತಿ, ದೊಡ್ಡಬಳ್ಳಾಪುರ ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್.ವಿ. ಮನು ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…