ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರನ್ನು ಆಂಧ್ರಪ್ರದೇಶ ಮೂಲದ ಎ1 ಸಯ್ಯದ್ ಅಬ್ಬಾಸ್ ಅಲಿ (45) ಹಾಗೂ ಎ4 ಹುಸೇನ್ ಬಾಷಾ (38) ಎಂದು ಗುರುತಿಸಲಾಗಿದೆ.
ಫೆ.12ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಗೀತಂ ಕಾಲೇಜಿನ ಅಂಡರ್‌ಪಾಸ್ ಬಳಿ ವೃದ್ಧ ದಂಪತಿ ತೋಟದ ಕಡೆಗೆ ತೆರಳುತ್ತಿದ್ದ ವೇಳೆ ಮೂವರು ಅಪರಿಚಿತರು ಅವರನ್ನು ತಡೆದು, ತಾವು ಪೊಲೀಸರು ಎಂದು ಪರಿಚಯಿಸಿಕೊಂಡಿದ್ದರು.
ಸ್ಥಳದಲ್ಲಿ ಎರಡು ಕೊಲೆ ಪ್ರಕರಣಗಳು ನಡೆದಿವೆ ಎಂದು ಹೇಳಿದ್ದಲ್ಲದೇ, ಚಿನ್ನಾಭರಣ ಧರಿಸಿಕೊಂಡು ಹೋಗಬಾರದು ಎಂದು ದಂಪತಿಯನ್ನು ಭಯಪಡಿಸಿ ಆಭರಣಗಳನ್ನು ತೆಗೆಸಿಕೊಂಡಿದ್ದಾರೆ.
ವೃದ್ಧೆ ಬಳಿಯಿದ್ದ ಸುಮಾರು 40 ಗ್ರಾಂ ತೂಕದ ಎರಡು ಎಳೆಗಳ ಮಾಂಗಲ್ಯ ಸರ, 2 ಗ್ರಾಂ ತೂಕದ ಎರಡು ಗುಂಡುಗಳು, 8 ಗ್ರಾಂ ತೂಕದ ತಾಳಿಬಿಚ್ಚಿ ಹಾಗೂ ವೃದ್ಧನ ಕೈಯಲ್ಲಿದ್ದ 10 ಗ್ರಾಂ ತೂಕದ ಉಂಗುರವನ್ನು ಪಡೆದುಕೊಂಡು, ಅವುಗಳನ್ನು ಕಾಗದದಲ್ಲಿ ಸುತ್ತಿಕೊಡುವುದಾಗಿ ಆರೋಪಿಗಳು ಹೇಳಿದ್ದರು. ಬಳಿಕ ದಂಪತಿ ಕಾಗದವನ್ನು ಪರಿಶೀಲಿಸಿದಾಗ ಚಿನ್ನಾಭರಣಗಳ ಬದಲಿಗೆ ಸಣ್ಣ ಗಾತ್ರದ ಜಲ್ಲಿಕಲ್ಲುಗಳು ಪತ್ತೆಯಾಗಿದ್ದವು.
ವಂಚನೆಗೊಳಗಾಗಿರುವುದು ಅರಿವಾದ ಬಳಿಕ ದಂಪತಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ವಶಪಡಿಸಿಕೊಂಡ ಚಿನ್ನಾಭರಣಗಳನ್ನು ಪೊಲೀಸ್ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ಅವರು ದೂರುದಾರರಿಗೆ ಹಸ್ತಾಂತರಿಸಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…