ಪೊಲೀಸ್ ಇಲಾಖೆಯಲ್ಲಿ ಮಹಾನ್ ಸಾಧನೆ ಮಾಡಿದ ಶ್ವಾನಕ್ಕೆ ಅದ್ಧೂರಿ ಬೀಳ್ಕೊಡುಗೆ: 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ: ಒಟ್ಟು 204 ಪ್ರಕರಣಗಳಲ್ಲಿ 35 ಅಪರಾಧ ಪ್ರಕರಣಗಳ ಕುರಿತಾದ ಸುಳಿವು: 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಇಲಾಖೆಗೆ ಸಹಕಾರ

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸುವಲ್ಲಿ ಶ್ರಮಿಸಿದ್ದು, ಹಿರಿಯ ಅಧಿಕಾರಿಗಳಿಂದ ಪದಕ, ಪ್ರಶಂಸೆ ಹಾಗೂ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದ ಪೊಲೀಸ್ ಶ್ವಾನಕ್ಕೆ ಬೀಳ್ಕೊಡುಗೆ ಕಾರ್ಯಕ್ರಮ ನಗರದ ಡಿ.ಎ.ಆರ್. ಆವರಣದಲ್ಲಿ ಏರ್ಪಡಿಸಲಾಗಿತ್ತು.

ಈ ಶ್ವಾನವು ತನ್ನ ಸೇವಾ ಅವಧಿಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜರುಗಿದ ಕಳ್ಳತನ, ದರೋಡೆ ಹಾಗೂ ಕೊಲೆ ಇತ್ಯಾದಿ ಒಟ್ಟು 204 ಪ್ರಕರಣಗಳಲ್ಲಿ 35 ರಲ್ಲಿ ಅಪರಾಧ ಪ್ರಕರಣಗಳ ಕುರಿತಾದ ಸುಳಿವು ಹಾಗೂ 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪೊಲೀಸ್ ಇಲಾಖೆಗೆ ಸಹಕರಿಸಿರುತ್ತದೆ.

ಶ್ವಾನವು ವಾರ್ಷಿಕವಾಗಿ ನಡೆಸಲಾಗುವ ಪೊಲೀಸ್ ಡ್ಯೂಟಿ ಮೀಟ್ ನಲ್ಲಿ ಹಲವಾರು ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿರುತ್ತದೆ. ಶ್ವಾನದ ಹ್ಯಾಂಡ್ಲರ್ ಮಂಜುನಾಥ ಮತ್ತು ಸಹಾಯಕ ನಿರ್ವಾಹಕ ಸಿ.ಕುಮಾರ್ ರವರಿಗೆ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿಕ್ರಮ್ ಅಮಟೆ ರವರು ಪ್ರಸಂಶನ ಪತ್ರ ನೀಡಿದರು.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

11 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

13 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

13 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

21 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

23 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

1 day ago