ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ


ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ ಅವ್ಯವಸ್ಥೆಗೆ ಅವಕಾಶ ನೀಡದೆ ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಿತು.

ದೊಡ್ಡಬಳ್ಳಾಪುರ ತಾಲೂಕಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಸಲಾಯಿತು. ಪರೀಕ್ಷೆಯ ಪಾರದರ್ಶಕತೆ ಹಾಗೂ ಭದ್ರತೆಯನ್ನು ಖಚಿತಪಡಿಸಲು ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳ ಮೂಲಕ ಲೈವ್ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿತ್ತು.

ಅಕ್ರಮ ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಝೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಜೊತೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಇದೇ ವೇಳೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರ ಸಂಖ್ಯೆ 103ರಲ್ಲಿ ಅಭ್ಯರ್ಥಿಗಳ ಫೇಸ್ ಡಿಟೆಕ್ಷನ್ ಪ್ರಕ್ರಿಯೆಗೆ ಬಳಸುತ್ತಿದ್ದ ಸರ್ವರ್ ತಾತ್ಕಾಲಿಕವಾಗಿ ಸ್ಥಗಿತಗೊಂಡ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಆರಂಭದಲ್ಲಿ ಅಭ್ಯರ್ಥಿಗಳಲ್ಲಿ ಆತಂಕ ಕಂಡುಬಂದರೂ, ಪರೀಕ್ಷಾ ಸಿಬ್ಬಂದಿ ತಕ್ಷಣವೇ ಮ್ಯಾನ್ಯುಯಲ್ ಪರಿಶೀಲನೆ ನಡೆಸಿ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದರು. ಇದರಿಂದ ಯಾವುದೇ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ತೊಂದರೆಯಾಗದೆ, ಎಲ್ಲರೂ ನಿರಾಳವಾಗಿ ಪರೀಕ್ಷೆಯಲ್ಲಿ ಭಾಗವಹಿಸಿದರು.

ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3,462 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 3,228 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 234 ಅಭ್ಯರ್ಥಿಗಳು ಗೈರಾಗಿದ್ದಾರೆ.

ಒಟ್ಟಾರೆ ಪರೀಕ್ಷೆ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯಿತು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

8 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

11 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

14 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

16 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

17 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago