ಪೊಲೀಸ್ ಠಾಣೆಗೆ ಶಾಲಾ ಮಕ್ಕಳ ಭೇಟಿ, ಮಕ್ಕಳಿಗೆ ಪೊಲೀಸ್ ಪಾಠ ಮಾಡಿದ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ

ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಸಲುವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತೆರದ ಮನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ತೆರದ ಮನೆ ಕಾರ್ಯಕ್ರಮದ ಅಂಗವಾಗಿ ತೂಬಗೆರೆ ಹೋಬಳಿಯ ಎಸ್ ಎಲ್ ಆರ್ ಎಸ್ ಶಾಲೆಯ 1-4ನೇ ತರಗತಿಯ ಮಕ್ಕಳು ಶಾಲಾ ಶಿಕ್ಷಕರೊಂದಿಗೆ ಠಾಣೆಗೆ ಭೇಟಿ ನೀಡಿದ್ದರು. ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಮಕ್ಕಳಿಗೆ ಅರ್ಥವಾಗುವ ರೀತಿ ಪೊಲೀಸ್ ಪಾಠ ಮಾಡಿದರು.

ಯಾರಾದರು ದುರ್ನಡತೆ ತೋರಿದಾಗ, ಒಂಟಿಯಾಗಿದ್ದಾಗ, ಅಪರಿಚಿತರನ್ನ ಕಂಡಾಗ ಯಾವೆಲ್ಲಾ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂಬೆಲ್ಲಾ ವಿಚಾರಗಳ ಬಗ್ಗೆ‌ ಸರಳವಾಗಿ ಮಕ್ಕಳಿಗೆ ತಿಳಿಸಿದರು.

ಮಕ್ಕಳು ಕುತೂಹಲದಿಂದ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿನ್ನು ವೀಕ್ಷಿಸಿದರು.

Ramesh Babu

Journalist

Recent Posts

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

58 minutes ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

5 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

6 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

12 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

12 hours ago

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

1 day ago