Categories: Crime

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಮವಾರ (ಫೆ.16) ಮಧ್ಯಾಹ್ನ ಬಿಇಎಲ್ ಬಡಾವಣೆಯ ಹೊಂಬಾಳೆಗೌಡರ ಮನೆಯಲ್ಲಿ ದರೋಡೆ ನಡೆದಿದೆ.

ಘಟನೆ ವೇಳೆ ಹೊಂಬಾಳೆಗೌಡ (53), ಪತ್ನಿ ಮಂಗಳಮ್ಮ ಮತ್ತು ಎರಡೂವರೆ ವರ್ಷದ ಮೊಮ್ಮಗು ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.

ಖಾಸಗಿ ಕಾರಿನಲ್ಲಿ ಯಲಹಂಕ ಪೊಲೀಸರು ಎಂದು ಹೇಳಿ ಸಬ್ ಇನ್ಸ್ಪೆಕ್ಟರ್ ಯೂನಿಫಾರ್ಮ್ ಧರಿಸಿ ಕೈಯಲ್ಲಿ ಡೈರಿ ಹಿಡಿದು ಒಬ್ಬ ಎಂಟ್ರಿ ಕೊಟ್ಟಿದ್ದು, ಹಿಂದೆ ಕ್ರೈಮ್ ಪಿಸಿ ರೀತಿ ಬ್ಯಾಗ್ ಹಾಕಿಕೊಂಡು ಮತ್ತೊಬ್ಬ ಎಂಟ್ರಿ ಕೊಟ್ಟಿದ್ದಾನೆ.

ಮೊದಲು ಮನೆಗೆ ನುಗ್ಗಿ ಗನ್ ಮತ್ತು ಚಾಕು ತೋರಿಸಿ, ಮನೆ ಮಾಲೀಕರನ್ನ ಲಾಕ್ ಮಾಡಿದ್ದಾರೆ. ನಂತರ ಹೊಂಬಾಳೆ ಗೌಡ ಹಾಗೂ ಮಂಗಳಮ್ಮಗೆ ಟೇಪ್ ಸುತ್ತಿ ಕೂರಿಸಿದ್ದಾರೆ. ಬಳಿಕ ಬೆಡ್‌ರೂಮ್ ಜಾಲಾಡಿ ಸುಮಾರು 20 ಲಕ್ಷ ರೂ. ಹಾಗೂ ಅರ್ಧ ಕೆಜಿ ಚಿನ್ನಾಭರಣ ದೋಚಿದ್ದಾರೆ.

ಇದೇ ವೇಳೆ ಆರೋಪಿಗಳ ಕೃತ್ಯಕ್ಕೆ ಬೆದರಿ ಹೊಂಬಾಳೆಗೌಡರು ಹಣ, ಒಡವೆ ಕೊಟ್ಟಿದ್ದಾರೆ. ಕೊನೆಗೆ ಪತ್ನಿ ಮಾಂಗಲ್ಯ ಬೇಕಾದ್ರೂ ತಗೊಳಿ ಎಂದಿದ್ದಕ್ಕೆ ಆರೋಪಿಗಳು ಬೇಡ ಎಂದು ಬಿಟ್ಟು ಹೋಗಿದ್ದಾರೆ.

ಪರಾರಿಯಾಗುವ ಇಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದಾರೆ. ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳಚಿಕೊಂಡು ಹೋಗಿದ್ದಾರೆ.

ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

19 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

23 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 day ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago