ಪೋಕ್ಸೋ ಪ್ರಕರಣದಲ್ಲಿ ಬಂಧನದ ಭಯ ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್.ವೈಗೆ ಹೈಕೋರ್ಟ್ ಸ್ವಲ್ಪ ಮಟ್ಟಿಗೆ ರಿಲೀಫ್ ನೀಡಿದೆ. ಇಂದು ಯಡಿಯೂರಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಬಿಎಸ್‌ವೈಗೆ ಜಾಮೀನು ನೀಡಿದೆ.
ಇದಲ್ಲದೇ ಮಾಜಿ ಸಿಎಂ ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅದೇರೀತಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಹೈಕೋರ್ಟ್ ನ್ಯಾಯಪೀಠ ತಾಕೀತು ಕೂಡ ಮಾಡಿದೆ.
ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿಯೇ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪಗೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕಿದೆ. ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ನಿನ್ನೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಬಿಎಸ್ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ನಿನ್ನೆ ಪೊಲೀಸರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…