ಪೋಕ್ಸೋ ಪ್ರಕರಣ: ಬಿಎಸ್‌ವೈಗೆ ಜಾಮೀನು ನೀಡಿದ ಹೈಕೊರ್ಟ್: ಬಂಧನ ಭೀತಿಯಿಂದ ಪಾರಾದ ಮಾಜಿ ಸಿಎಂ ಬಿ.ಎಸ್.ವೈ

ಪೋಕ್ಸೋ ಪ್ರಕರಣದಲ್ಲಿ ಬಂಧನದ ಭಯ ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್.ವೈಗೆ ಹೈಕೋರ್ಟ್ ಸ್ವಲ್ಪ ಮಟ್ಟಿಗೆ ರಿಲೀಫ್ ನೀಡಿದೆ. ಇಂದು ಯಡಿಯೂರಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಬಿಎಸ್‌ವೈಗೆ ಜಾಮೀನು ನೀಡಿದೆ.

ಇದಲ್ಲದೇ ಮಾಜಿ ಸಿಎಂ ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅದೇರೀತಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಹೈಕೋರ್ಟ್ ನ್ಯಾಯಪೀಠ ತಾಕೀತು ಕೂಡ ಮಾಡಿದೆ.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿಯೇ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪಗೆ ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕಿದೆ. ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ನಿನ್ನೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಬಿಎಸ್ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ನಿನ್ನೆ ಪೊಲೀಸರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ​ವಾರಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.

Ramesh Babu

Journalist

Recent Posts

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

1 hour ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

2 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

8 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

20 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

24 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago