ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ನಡೆದ ಮುನ್ನುಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಮಿತಿ ಹಾಕಿಕೊಂಡು ವಿದ್ಯಾಭ್ಯಾಸದತ್ತ ಹೆಚ್ಚಿನ ಗಮನ ಹರಿಸಬೇಕು. ತಮ್ಮ ಭವಿಷ್ಯಕ್ಕಾಗಿ ತಂದೆ-ತಾಯಿ ಪಡುವ ಕಷ್ಟ, ನೋವು ಮತ್ತು ಶ್ರಮವನ್ನು ಅರ್ಥಮಾಡಿಕೊಂಡು ಶ್ರದ್ಧೆಯಿಂದ ಓದಬೇಕು. ಶಿಕ್ಷಣದ ಮೂಲಕ ಜ್ಞಾನ, ಆತ್ಮವಿಶ್ವಾಸ ಮತ್ತು ಕೌಶಲ್ಯ ಬೆಳೆಸಿಕೊಂಡು ಜೀವನದಲ್ಲಿ ತಮ್ಮ ಕಾಲ ಮೇಲೆ ತಾವು ನಿಲ್ಲುವಂತಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ್ ಅರಸ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ರಾಜೇಂದ್ರ ಜಾಲಪ್ಪ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳ ಜ್ಞಾನಕ್ಕೆ ಸೀಮಿತರಾಗಬಾರದು. ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಇತರ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಹಾಗೂ ಸಾಮರ್ಥ್ಯ ಅಡಗಿರುತ್ತದೆ. ಅದನ್ನು ಗುರುತಿಸಿ, ಸರಿಯಾದ ದಿಕ್ಕಿನಲ್ಲಿ ಬಳಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಗೌರ್ನಿಂಗ್ ಕೌನ್ಸಿಲ್ ನ ಸದಸ್ಯರಾದ ರಾಕೇಶ್ ರಾಜೇಂದ್ರ, ಉತ್ತಮ ಕುಮಾರ್, ಕೊಂಗಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ಎನ್., ಕಲಾವಿದರಾದ ದೇವರಾಜ್, ದೇವರಾಜ್ ಅರಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಉಮೇಶ್ ಬಾವಿಕಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ, ಉಪಪ್ರಾಂಶುಪಾಲರಾದ ಡಾ. ಹರಿಪ್ರಿಯಾ, ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಚಿಕ್ಕಣ್ಣ, ಮುಖ್ಯ ಶಿಕ್ಷಕ ಜಿಯಾ ಉಲ್ಲಾಖಾನ್, ಸಂಶೋಧನಾ ವಿಭಾಗದ ಮುಖ್ಯಸ್ಥರಾದ ನೀರಜ್, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಭಾವನ, ದಿವ್ಯ ಹಾಗೂ ರಮ್ಯಾ, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…