ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

2023-24ನೇ ಶೈಕಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ (ಪಿ.ಯು.ಸಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್) ಗಳಲ್ಲಿ ಓದುತ್ತಿರುವ ಕರ್ನಾಟಕ ರಾಜ್ಯದಲ್ಲಿರುವ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಆನ್ಲೈನ್ https://ssp.Karnataka.gov.in (ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15.
ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ), ವಿದ್ಯಾರ್ಥಿಯು ಕರ್ನಾಟಕ ನಿವಾಸಿಯಾಗಿರಬೇಕು, ವಿದ್ಯಾರ್ಥಿಯು ಓದುತ್ತಿರುವ ಹಿಂದಿನ ವರ್ಷದಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು, ಮೆಟ್ರಿಕ್ ನಂತರದ (ಶುಲ್ಕ ಮರುಪಾವತಿ) ಗಾಗಿ ವಿದ್ಯಾರ್ಥಿಯ ಕುಂಟುಂಬದ ವಾರ್ಷಿಕ ಆದಾಯವು ರೂ.2.00ಲಕ್ಷ ಮೀರಿರಬಾರದು. 5.ಮೆರಿಟ್-ಕಮ್-ಮೀನ್ಸ್ (ಶುಲ್ಕ ಮರುಪಾವತಿ)ಗಾಗಿ ವಿದ್ಯಾರ್ಥಿಯ ಕುಂಟುಂಬದ ವಾರ್ಷಿಕ ಆದಾಯವು ರೂ.2.50ಲಕ್ಷ ಮೀರಿರಬಾರದು.
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://Dom.Karnataka.gov.in ಅನ್ನು ವೀಕ್ಷಿಸಿ, ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸುವುದು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-22866966, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27627444/ 9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-27725445/9986951290, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27682882/8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27931899/7676905779 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

6 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

7 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

8 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

18 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago