ನೆಲಮಂಗಲ: ನಗರದ ವೀವರ್ಸ್ ಕಾಲೋನಿಯ ಮಾರುತಿ ನಗರದಲ್ಲಿ ಕಸ ತೆರವು ವಿಚಾರವಾಗಿ ಮಹಿಳೆ ಮತ್ತು ಪೌರ ಕಾರ್ಮಿಕನ ನಡುವೆ ವಾಗ್ವಾದ ನಡೆದಿದ್ದು, ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾರ್ಡ್ ನಂ. 14ರ ವ್ಯಾಪ್ತಿಯಲ್ಲಿ ರಾಜಕಾಲುವೆ ಬಳಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರೊಂದಿಗೆ ಮಹಿಳೆ ಕಿರಿಕ್ ಮಾಡಿದ್ದಾರೆ ಎನ್ನಲಾಗಿದೆ. ಮೊದಲು ತಮ್ಮ ಮನೆಯ ಮುಂದೆ ಕಸ ತೆರವುಗೊಳಿಸುವಂತೆ ಮಹಿಳೆ ಒತ್ತಾಯಿಸಿದ್ದು, ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.
ಈ ವೇಳೆ ಮಹಿಳೆ ಪೌರ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಪೌರ ಕಾರ್ಮಿಕರು ಮಹಿಳೆಯ ಮನೆಯ ಮುಂದೆ ಟ್ರ್ಯಾಕ್ಟರ್‌ನಿಂದ ಕಸ ಸುರಿದು ಪ್ರತಿಭಟನೆ ನಡೆಸಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪ ಹಾಗೂ ಅದಕ್ಕೆ ಪ್ರತಿಯಾಗಿ ಮನೆಯ ಮುಂದೆ ಕಸ ಸುರಿದಿರುವ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಅಂತಿಮ ಮತದಾರರ ಪಟ್ಟಿಯುಲ್ಲಿ 8,04,534 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್…
ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡಿರುವುದಕ್ಕೆ ಅತಿಯಾದ ಆತ್ಮವಿಶ್ವಾಸವೂ…
ಪ್ರಾಮಾಣಿಕತೆ ಎಂಬುದು ಬರಹದಲ್ಲಿ - ಭಾಷಣಗಳಲ್ಲಿ ಅಥವಾ ಬೇರೆ ಯಾವುದೇ ವೇದಿಕೆಯಲ್ಲಿ ಖಾಸಗಿಯಾಗಿ ಅಥವಾ ಸಾರ್ವಜನಿಕವಾಗಿ ಹೇಳುವುದು ಮತ್ತು ಅದರಂತೆ…
ದೇವನಹಳ್ಳಿ: ಕರ್ನಾಟಕ ರಾಜ್ಯಕ್ಕೆ ಪಾವತಿಸಬೇಕಾದ ತೆರಿಗೆಯನ್ನು ಕಟ್ಟದೆ ಸಂಚರಿಸುತ್ತಿದ್ದ ಹೊರರಾಜ್ಯಗಳಲ್ಲಿ ನೋಂದಣಿಯಾದ ಖಾಸಗಿ ಬಸ್‌ಗಳ ವಿರುದ್ಧ ಸಾರಿಗೆ ಇಲಾಖೆ ಅಧಿಕಾರಿಗಳು…
ಜಿಲ್ಲೆಯಲ್ಲಿ ಇತ್ತೀಚೆಗೆ ವಾಹನಗಳ ಟೈರ್‌ಗಳು ಪಂಕ್ಚರ್ ಆಗುವ ಪ್ರಕರಣಗಳು ಹೆಚ್ಚುತ್ತಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿವೆ. ರಸ್ತೆಗಳಲ್ಲಿ ಮೊಳೆ ಹಾಗೂ ಮೊನಚಾದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಸಮೀಪ ಇಂದು ಮಧ್ಯಾಹ್ನ ಕರಡಿಯೊಂದು ಕಾಣಿಸಿಕೊಂಡಿದ್ದು, ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಚಿರತೆ ಕಂಡು ಭಯಭೀತರಾದ…