ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ದೇಶದಲ್ಲಿ ಸಂಚಲನ ಮೂಡಿಸಿದ್ದ ರಾಹುಲ್ ಗಾಂಧಿ. ಇದೀಗ ಯುದ್ಧ ಭೂಮಿಯತ್ತ ಬೈಕ್ ನಲ್ಲಿ ಪ್ರಯಾಣ ಬೆಳೆಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಜಮ್ಮು ಕಾಶ್ಮೀರದ ಪೂರ್ವ ಲಡಾಖ್‌ನ ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪ್ರಯಾಣ ಬೆಳೆಸಿದರು, ಅಲ್ಲಿ ಅವರು ಪ್ರವಾಸಿ ಶಿಬಿರದಲ್ಲಿ ರಾತ್ರಿ ತಂಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ರಾಹುಲ್ ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾದ ಆಗಸ್ಟ್ 20 ರಂದು ಪ್ಯಾಂಗಾಂಗ್ ಸರೋವರದಲ್ಲಿ ಆಚರಿಸಲಿದ್ದಾರೆ. ಇದಕ್ಕೂ ಮುನ್ನಾ ಶುಕ್ರವಾರ ಲಡಾಖ್‌ಗೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಲೇಹ್‌ನಲ್ಲಿ 500 ಕ್ಕೂ ಹೆಚ್ಚು ಯುವಕರೊಂದಿಗೆ ಸಂವಾದ ನಡೆಸಿದರು. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಹೊಸದಾಗಿ ರಚನೆಯಾದ ಕೇಂದ್ರಾಡಳಿತ ಪ್ರದೇಶಕ್ಕೆ ರಾಹುಲ್ ಗಾಂಧಿಯವರ ಮೊದಲ ಭೇಟಿ ಇದಾಗಿದೆ.
ಸುಮಾರು 4,350 ಮೀಟರ್ ಎತ್ತರದಲ್ಲಿರುವ ಪ್ಯಾಂಗೊಂಗ್ ಸರೋವರವು ವಿಶ್ವದ ಅತಿ ಎತ್ತರದ ಉಪ್ಪುನೀರಿನ ಸರೋವರವಾಗಿದೆ. ಅದರ ನೀರು, ನೀಲಿ ಬಣ್ಣದಿಂದ ಕಂಗೊಳಿಸುತ್ತದೆ, ಈ ಸರೋವರ ಸುಮಾರು 160 ಕಿಲೋಮೀಟರ್ ವರೆಗೆ ವಿಸ್ತರಿಸಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…