ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪಯಣ ಬೆಳೆಸಿದ ರಾಹುಲ್ ಗಾಂಧಿ: ತನ್ನ ತಂದೆ ಹುಟ್ಟುಹಬ್ಬ ಆಚರಿಸಲು ಹೊರಟ ರಾಹುಲ್ ಗಾಂಧಿ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಮೂಲಕ ದೇಶದಲ್ಲಿ ಸಂಚಲನ ಮೂಡಿಸಿದ್ದ ರಾಹುಲ್ ಗಾಂಧಿ. ಇದೀಗ ಯುದ್ಧ ಭೂಮಿಯತ್ತ ಬೈಕ್ ನಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಜಮ್ಮು ಕಾಶ್ಮೀರದ ಪೂರ್ವ ಲಡಾಖ್‌ನ ಪ್ಯಾಂಗೊಂಗ್ ಸರೋವರಕ್ಕೆ ಬೈಕ್‌ನಲ್ಲಿ ಪ್ರಯಾಣ ಬೆಳೆಸಿದರು, ಅಲ್ಲಿ ಅವರು ಪ್ರವಾಸಿ ಶಿಬಿರದಲ್ಲಿ ರಾತ್ರಿ ತಂಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ರಾಹುಲ್ ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾದ ಆಗಸ್ಟ್ 20 ರಂದು ಪ್ಯಾಂಗಾಂಗ್ ಸರೋವರದಲ್ಲಿ ಆಚರಿಸಲಿದ್ದಾರೆ. ಇದಕ್ಕೂ ಮುನ್ನಾ ಶುಕ್ರವಾರ ಲಡಾಖ್‌ಗೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಲೇಹ್‌ನಲ್ಲಿ 500 ಕ್ಕೂ ಹೆಚ್ಚು ಯುವಕರೊಂದಿಗೆ ಸಂವಾದ ನಡೆಸಿದರು. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಹೊಸದಾಗಿ ರಚನೆಯಾದ ಕೇಂದ್ರಾಡಳಿತ ಪ್ರದೇಶಕ್ಕೆ ರಾಹುಲ್ ಗಾಂಧಿಯವರ ಮೊದಲ ಭೇಟಿ ಇದಾಗಿದೆ.

ಎಲ್ಲಿದೆ ಗೊತ್ತಾ ಪ್ಯಾಂಗೊಂಗ್ ಸರೋವರ?

ಸುಮಾರು 4,350 ಮೀಟರ್ ಎತ್ತರದಲ್ಲಿರುವ ಪ್ಯಾಂಗೊಂಗ್ ಸರೋವರವು ವಿಶ್ವದ ಅತಿ ಎತ್ತರದ ಉಪ್ಪುನೀರಿನ ಸರೋವರವಾಗಿದೆ. ಅದರ ನೀರು, ನೀಲಿ ಬಣ್ಣದಿಂದ ಕಂಗೊಳಿಸುತ್ತದೆ, ಈ ಸರೋವರ ಸುಮಾರು 160 ಕಿಲೋಮೀಟರ್ ವರೆಗೆ ವಿಸ್ತರಿಸಿದೆ.

ಲೇಹ್ ಲಡಾಖ್‌ನ ಅತ್ಯಂತ ಪ್ರಸಿದ್ಧ ಸರೋವರಗಳಲ್ಲಿ ಒಂದಾದ ಪ್ಯಾಂಗೊಂಗ್ ಸರೋವರವು ಟಿಬೆಟಿಯನ್ ಪದವಾದ ಪ್ಯಾಂಗಾಂಗ್ ತ್ಸೋ ನಿಂದ ತನ್ನ ಹೆಸರನ್ನು ಪಡೆದುಕೊಂಡಿದೆ, ಇದರರ್ಥ ಎತ್ತರದ ಹುಲ್ಲುಗಾವಲು ಸರೋವರ. ನೀವು ಇಲ್ಲಿ ಗಂಟೆಗಟ್ಟಲೆ ಧ್ಯಾನಿಸಬಹುದು, ಪ್ಯಾಂಗೊಂಗ್ ಸರೋವರವು ವಿವಿಧ ಸಮಯಗಳಲ್ಲಿ ನೀಲಿ, ಹಸಿರು ಮತ್ತು ಕೆಂಪು ಬಣ್ಣಗಳಲ್ಲಿ ಬಣ್ಣಗಳನ್ನು ಬದಲಾಯಿಸುತ್ತದೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

6 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

18 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

22 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago