ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ ಎಂದು ಸರ್ಕಾರ ತಿಳಿಸಿದೆ.
ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್‌ನ ಹಮಾಸ್ ಉಗ್ರರ ನಡುವಿನ ಯುದ್ಧ ಎರಡನೇ ದಿನ ಮತ್ತಷ್ಟು ಭೀಕರತೆಯನ್ನ ಪಡೆದುಕೊಂಡಿದೆ. ದಾಳಿ-ಪ್ರತಿದಾಳಿಗಳಿಂದ ಆನೇಕ ಸಾವು ನೋವು ಹೆಚ್ಚಾಗುತ್ತಿದೆ. 48 ಗಂಟೆ ಅವಧಿಯಲ್ಲಿ 1000 ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಈ ಪೈಕಿ ಇಸ್ರೇಲ್ ಪ್ರಜೆಗಳ ಸಂಖ್ಯೆಯೇ 600ಕ್ಕೂ ಅಧಿಕವಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಈ ಹಿನ್ನೆಲೆ ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.
ಯಾವುದೇ ರೀತಿಯ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಸಹಾಯವಾಣಿ 080 22340676, 080 22253707 ಸಂಪರ್ಕಿಸಬಹುದು. ಅದೇ ರೀತಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ +97235226748 ಸಂಖ್ಯೆಗೆ ಕರೆ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…