ಕೋಲಾರ: ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯ ಸಂದರ್ಭದಲ್ಲಿನ ಗಲಾಟೆಗೆ ಕಾರಣವಾದ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಬುಧವಾರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅವರಿಗೆ ಮನವಿ ನೀಡಿ ಒತ್ತಾಯಿಸಿದರು,
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಕಳೆದ ಸೋಮವಾರ ಮುಸ್ಲಿಂ ಸಮುದಾಯದ ಹಬ್ಬ ಈದ್ ಮಿಲಾದ್ ಸಂದರ್ಭದಲ್ಲಿ ರಸ್ತೆ ಮೆರವಣಿಗೆ ಮೂಲಕ ಹಾದು ಹೋಗುವಾಗ ಜಿಲ್ಲಾಡಳಿತ ನಿಗದಿಪಡಿಸಿದ್ದ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದು ಅಲ್ಲದೇ ಪ್ಯಾಲೆಸೈನ್ ಬಾವುಟ ಪ್ರದರ್ಶನ ಮಾಡಿ ಭಾವುಟ ಹಾರಿಸಿದ ದೇಶದ್ರೋಹಿಗಳನ್ನು ಹಾಗೂ ಈ ದೇಶದ ಕಾನೂನಿಗೆ ಗೌರವ ನೀಡದೆ ಕಾನೂನನ್ನು ವಿರೋಧಿಸುವ ಘೋಷಣೆಗಳನ್ನು ಕೂಗಿದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂಬುದು ಒತ್ತಾಯಿಸಿದರು.
ದೇಶದ್ರೋಹ ಕೃತ್ಯವನ್ನು ಜನಪ್ರತಿನಿಧಿಗಳ ಮುಂದೆಯೇ ನಡೆದಿದೆ ಪ್ಯಾಲೆಸ್ಟೈನ್ ಬಾವುಟ ಪ್ರದರ್ಶನ ಮಾಡಿದ್ದು ಮತ್ತು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದು ಈ ಘಟನೆಯನ್ನು ತಡೆಯದೆ ಇದಕ್ಕೆ ಕುಮ್ಮಕು ಕೊಟ್ಟಂತಹ ಜನಪ್ರತಿನಿಧಿಗಳ ಮೇಲು ಕಾನೂ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಮುಖವಾಗಿ ಅಂಜುಮನ್ ಇಸ್ಲಾಮಿಯ ಸಂಸ್ಥೆಯ ಮುಖ್ಯಸ್ಥ ಮೇಲೆ ದೇಶದ್ರೋಹ
ಪ್ರಕರಣ ದಾಖಲಿಸಬೇಕು ಎರಡು ದಿನಗಳಲ್ಲಿ ಇವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮನವಿ ಕೊಡುವ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾ.ಮಾ ಅನಿಲ್ ಬಾಬು, ನಾಮಲ್ ಮಂಜು, ಬಾಲಾಜಿ, ಕೆಂಬೋಡಿ ನಾರಾಯಣಸ್ವಾಮಿ ಇದ್ದರು.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…