Categories: ಕೋಲಾರ

ಪ್ರಚಾರದ ಕೊರತೆ: ನೈಜತೆ ಕಳೆದುಕೊಂಡ ಜನಪರ ಉತ್ಸವ ಬೇಕಾಬಿಟ್ಟಿ ಖರ್ಚಿಗೆ ಸೀಮಿತ -ನಾಗನಾಳ ಮುನಿಯಪ್ಪ ಖಂಡನೆ

ಕೋಲಾರ: ನಗರದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ದಲಿತರ ಹಣವನ್ನು ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಖರ್ಚು ಮಾಡಲು ಅಷ್ಟೇ ಸೀಮಿತವಾಗಿದೆ ಸರಿಯಾದ ಪ್ರಚಾರವಿಲ್ಲದೇ ಜನರೇ ಬಂದಿಲ್ಲ ಉತ್ಸವದ ನೈಜತೆ ಕಳೆದುಕೊಂಡಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ನಾಗನಾಳ ಮುನಿಯಪ್ಪ ಕಾರ್ಯಕ್ರಮ ಕುರಿತು ಖಂಡಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈ ವರ್ಷದ ಮಾರ್ಚ್ ತಿಂಗಳ ಅಂತ್ಯದಲ್ಲಿ ದಲಿತರಗಾಗಿ ಇಂತಿಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ತೋರಿಸುವ ಒಂದು ಉನ್ನಾರವೇ ಹೊರತು ದಲಿತ ಕಲಾವಿದರನ್ನು ಪ್ರೋತ್ಸಾಹಿಸುವ ಯಾವುದೇ ಉದ್ದೇಶವು ಜಿಲ್ಲಾಡಳಿತಕ್ಕೆ ಆಗಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಶೋಭೆ ತರುವ ಕೆಲಸವಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದರು.

ಕಾರ್ಯಕ್ರಮದ ಕುರಿತು ಯವುದೇ ಪೂರ್ವ ತಯಾರಿಲ್ಲದೆ ದಲಿತರು ರೈತರು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸರಿಯಾದ ಮಾಹಿತಿ ಇಲ್ಲದೆ ಹಸ್ತವ್ಯಸ್ತವಾಗಿ ಕಾರ್ಯಕ್ರಮ ರೂಪಿಸುವ ಅಗತ್ಯವೇನಿತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಜಿಲ್ಲೆಗೆ ರಾಜ್ಯಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತನೆ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು

ಜಿಲ್ಲಾ ಉಸ್ತುವಾರಿ ಮಂತ್ರಿ ಬೈರತಿ ಸುರೇಶ್ ಮತ್ತು ಅವರ ಪಟಾಲಮ್ ಈ ರೀತಿ ತೀರ್ಮಾನಗಳನ್ನು ತೆಗೆದುಕೊಂಡು ದಲಿತರನ್ನು ಅವಮಾನಿಸುವ ಉನ್ನಾರವಾಗಿದೆ ಮುಖ್ಯಮಂತ್ರಿಗಳು ಇಂತಹ ವಿಚಾರಗಳಿಗೆ ಪ್ರೋತ್ಸಾಹ ಮಾಡುವ ಮುಖಾಂತರ ದಲಿತರ ಹಣವನ್ನು ಪೋಲು ಮಾಡುವ ಮುಖಾಂತರ ದಲಿತರನ್ನ ತಪ್ಪು ದಾರಿಗೆ ಸರ್ಕಾರ ಎಳೆಯುತ್ತಿದೆ ಎಂದು ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿದರು

ರಾಜ್ಯಾದ್ಯಂತ ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ ಪಿ ಮತ್ತು ಟಿ ಎಸ್ ಪಿ ಹಣವನ್ನು ಬಳಕೆ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವುದು ಸರಿ ಅನಿಸುತ್ತದೆ ಈಗಲಾದರೂ ರಾಜ್ಯದಲ್ಲಿರುವ ದಲಿತ ಶಾಸಕರು ದಲಿತ ಎಂಪಿ ಗಳು ಎಚ್ಚೆತ್ತು ದಲಿತರ ಹಣವನ್ನು ದಲಿತರಿಗೆ ಖರ್ಚು ಮಾಡಲು ನಿಗಾ ವಹಿಸಬೇಕಾಗಿದೆ ತೆಲಂಗಾಣದಲ್ಲಿ ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಕರ್ನಾಟಕದಲ್ಲಿ ಅನಗತ್ಯವಾಗಿ ಒಂದು ಆಯೋಗ ಮಾಡುವ ಮುಖಾಂತರ ಒಳ ಮೀಸಲಾತಿಯನ್ನು ಜಾರಿಗೆ ತಾರದೆ ಇನ್ನಷ್ಟು ವಿಳಂಬ ಮಾಡುವ ಉನ್ನಾರವನ್ನು ಸರ್ಕಾರ ಮಾಡುತ್ತಿರುವುದು ಒಳ ಮೀಸಲಾತಿ ಜಾರಿಗೆ ತರುವುದು ಅನುಮಾನವಿದೆ ಎಂದರು

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

7 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

11 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

20 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

22 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

1 day ago