ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಪ್ರಚಾರ ನಡೆಸುತ್ತಿದ್ದ ವೇಳೆ ದುಷ್ಕರ್ಮಿ ಕಲ್ಲು ತೂರಿದ್ದು ಅವರ ತಲೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ, ಈ ಹಿನ್ನೆಲೆ ಚುನಾವಣಾ ಪ್ರಚಾರದ ಕಾರ್ಯ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಅದೇ ರೀತಿ ತುಮಕೂರಿನ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅವರ ತಲೆಗೆ ಗಾಯವಾಗಿ ರಕ್ತ ಸೋರಿಕೆಯಾಗಿದೆ.
ತಾಲೂಕಿನ ಭೈರೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಚಾರದ ವೇಳೆಯಲ್ಲಿ ಡಾ. ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ. ಕೂಡಲೇ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…