ಪ್ರಜಾತಂತ್ರ ರಕ್ಷಣೆಯ ಅಪರೂಪ ಪ್ರಸಂಗ: ಚಂಡಿಗಢ ಮೇಯರ್ ಚುನಾವಣೆ: ನ್ಯಾಯಾಲಯದಲ್ಲೇ ಮರು ಮತ ಎಣಿಕೆ: ನ್ಯಾಯಮೂರ್ತಿಗಳಿಂದಲ್ಲೇ ಫಲಿತಾಂಶ ಘೋಷಣೆ

ನವದೆಹಲಿ: ಚಂಡಿಗಢ ಮೇಯರ್ ಚುನಾವಣೆ ಅಕ್ರಮದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನ್ಯಾಯಾಲಯದ ಸಭಾಂಗಣದಲ್ಲೇ ಮತ ಎಣಿಕೆ‌ ಮಾಡಿ ಫಲಿತಾಂಶ ಘೋಷಿಸಿದ ಪ್ರಸಂಗ ಮಂಗಳವಾರ ನಡೆಯಿತು.

ಎಎಪಿ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ನ್ಯಾಯಾಲಯ ಚಂಡಿಗಢದ ನೂತನ ಮೇಯರ್ ಆಗಿ ಪ್ರಕಟಿಸಿತು.

ಮಂಗಳವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಮತ ಪತ್ರಗಳನ್ನು ತರಿಸಿಕೊಂಡು ಪರಿಶೀಲಿಸಿದ ನ್ಯಾಯಮೂರ್ತಿಗಳು, ಎಂಟು ಮತ ಪತ್ರಗಳನ್ನು ವಿರೂಪಗೊಳಿಸಿ ಅನೂರ್ಜಿತಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮೆಸಿಹ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಜ.30 ರಂದು ನಡೆದ‌ ಚುನಾವಣಾ ಪ್ರಕ್ರಿಯೆಯಲ್ಲಿ ಮತ ಪತ್ರಗಳನ್ನು ವಿರೂಪಗೊಳಿಸಿ, ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿದ್ದ ಚುನಾವಣಾಧಿಕಾರಿ ವಿರುದ್ಧ ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿತ್ತು. ಮತಪತ್ರ ತಿದ್ದಿದ ವಿಡಿಯೋ ತುಣುಕುಗಳು ವೈರಲ್ ಆಗಿದ್ದವು.

ಈ ಹಿನ್ನೆಲೆ ಮತಗಳ ಮರು ಎಣಿಕೆ‌ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ಒಪ್ಪಿಸಲು ನಿರಾಕರಿಸಿ‌ ಖುದ್ದು  ನ್ಯಾಯಪೀಠವೇ ಪ್ರಕ್ರಿಯೆ ನಡೆಸಿ, ನ್ಯಾಯಮೂರ್ತಿಗಳೇ ಫಲಿತಾಂಶ ಘೋಷಿಸಿದರು.

ಚುನಾವಣಾ‌ ಅಕ್ರಮದ ಹಿನ್ನೆಲೆಯಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕೆಂಬ ಬಿಜೆಪಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪಗಳಿಲ್ಲದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಹಾಗಾಗಿ ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago