ಪ್ರಜಾಧ್ವನಿ ಯಾತ್ರೆ ಜನರ ಧ್ವನಿಯನ್ನು ಎತ್ತಿಹಿಡಿಯುವ ಯಾತ್ರೆ- ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

ಪ್ರಜಾಧ್ವನಿ ಸಮಾವೇಶ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ ಪ್ರಜಾಧ್ವನಿ ಯಾತ್ರೆ ಕೇವಲ ಕಾಂಗ್ರೆಸ್ ಯಾತ್ರೆ ಅಲ್ಲ. ಈ ಯಾತ್ರೆ ಜನತೆಯ ಯಾತ್ರೆಯಾಗಿದೆ.

ಬಿಜೆಪಿಯ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರದ 40% ಕಮಿಷನ್ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುತ್ತಿದೆ. ಗುತ್ತಿಗೆದಾರರ ಸಂಘ ಪ್ರಧಾನ ಮಂತ್ರಿಗೆ ಇಲ್ಲಿನ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈವರಗೆ ಉತ್ತರಿಸಿಲ್ಲ.

ಬಿಜೆಪಿಯ ಭ್ರಷ್ಟಾಚಾರಕ್ಕೆ ಗುತ್ತಿಗೆದಾರ ಸಂತೋಷ ಪಾಟೀಲ್ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಶಿಕ್ಷಣ ಮಂತ್ರಿಯಿಂದ ಮುಖ್ಯಮಂತ್ರಿವರೆಗೂ ಭ್ರಷ್ಟಾಚಾರ ಹೆಚ್ಚಿದೆ. ಇದನ್ನ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನೌಕರಿ, ಗುತ್ತಿಗೆ, ನೇಮಕಾತಿ, ಪ್ರತಿಯೊಂದಕ್ಕೆ ಲಂಚ ಲಂಚ ಎನ್ನುವಂತಾಗಿದೆ.

ಪ್ರಜಾಧ್ವನಿ ಯಾತ್ರಾ ಜನರ ಧ್ವನಿಯನ್ನು ಎತ್ತಿಹಿಡಿಯುವ ಯಾತ್ರೆ. ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಅನ್ಯಾಯಕ್ಕೊಳಗಾದ ಬಡವರ ಪರ ಕಾಂಗ್ರೆಸ್ ಕೆಲಸ ಮಾಡಲಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನ ಅಧಿಕಾರಕ್ಕೆ ಬಂದಂತೆ, ಎಲ್ಲಾ ಜನತೆಯ ಕಷ್ಟವನ್ನು ಕೇಳಿ ಬಗೆಹರಿಸುವ ಸಲುವಾಗಿ ಪ್ರಜಾಧ್ವನಿ ಯಾತ್ರೆ ಮಾಡುತ್ತಿದ್ದೇವೆ ಎಂದರು.

ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯ ಕರ್ಮಕಾಂಡವನ್ನು ಜನ ಎಳೆ ಎಳೆಯಾಗಿ ಬಿಚ್ಚಿಡುತ್ತಿದ್ದಾರೆ. ಕೋಮುವಾದಿ ಬಿಜೆಪಿ ಪಕ್ಷವನ್ನು ದೂರ ಇರಿಸುವ ಕಾರಣಕ್ಕೆ ಜೆಡಿಎಸ್ ಗೆ ಬೆಂಬಲ ನೀಡಿ ಅಧಿಕಾರ ನೀಡಿದೆವು. ನಾವು ಯಾವ ಆಸೆ ಪಡಲಿಲ್ಲ. ಪಾಪ ಕುಮಾರಸ್ವಾಮಿ ಕೈಲಿ ಅಧಿಕಾರವನ್ನು ಉಳಿಸಿಕೊಳ್ಳಲು ಆಗಲಿಲ್ಲ. ಈ ಭಾಗದ ಜೆಡಿಎಸ್ ನ ಎಂಎಲ್ಸಿಗಳಾದ ಬೆಮೆಲ್ ಕಾಂತರಾಜು, ಸಿಆರ್ ಮನೋಹರ್, ವೈಎಸ್ ವಿ ದತ್ತಾ, ಸೇರಿ ಹತ್ತಾರು ಜೆಡಿಎಸ್ ನಾಯಕರು ಪಕ್ಷಕ್ಕೆ ಸೇರ್ಪಡೆಯಾದರು.

ಕುಮಾರಣ್ಣ ರಾಜಕೀಯದಲ್ಲಿ ಸೋಲು ಗೆಲುವು ಸಾಮಾನ್ಯ, ಆದರೆ ಕಾಂಗ್ರೆಸ್ ಪಕ್ಷದ ಒಂದು ಸಿದ್ಧಾಂತದ ಮೇಲೆ ಇದೆ‌. ರಾಜ್ಯದಲ್ಲಿ 40% ಕಮಿಷನ್ ಸರಕಾರ ನಡೆಯುತ್ತಿದೆ. ಬೆಳಗಾವಿಯ ಶಾಸಕ ಒಂದು ಮತಕ್ಕೆ 6 ಸಾವಿರ ಕೊಟ್ಟು, 10 ಕೋಟಿ ಖರ್ಚು ಮಾಡಿ ಚುನಾವಣೆ ಮಾಡ್ತೀವಿ ಎಂದಿದ್ದಾರೆ. ಆದರೆ ಇಡಿ, ಐಟಿ ಏನು ಮಾಡುತ್ತಿದೆ.

ಕೇವಲ ಹಣದಿಂದ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ ಎಂದು ಮಾತನಾಡುತ್ತಿದ್ದಾರೆ. ಈ ಸರಕಾರದಲ್ಲಿ 40% ಕಮಿಷನ್ ಕೊಡದೆ ಇದ್ದರೆ ಕೆಲಸ ಮಾಡಲಾಗುವುದಿಲ್ಲ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಭ್ರಷ್ಟಾಚಾರಕ್ಕೆ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾವು ವಿಧಾನಸಸೌಧದಲ್ಲಿ ಹೋರಾಟ ಮಾಡಿದಾಗ ಈಶ್ವರಪ್ಪ ರಾಜೀನಾಮೆ ನೀಡಿದರು. ಯಾವುದೇ ಸರಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇನ್ಸ್‌ಪೆಕ್ಟರ್ ನಂದೀಶ್ ಸಚಿವ ಭೈರತಿ ಬಸವರಾಜ ಕಾಟಕ್ಕೆ ಸಾವನ್ನಪ್ಪಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರಿಂದ 50 ಕ್ವಿಂಟಾಲ್ ರಾಗಿ ಖರೀದಿ ಮಾಡುತ್ತೇವೆ. ರೈತ ಬೆಳೆದ ಬೆಳೆಗೆ ಬೆಲೆ ಇಲ್ಲ.

ಸಮಾಜದಲ್ಲಿ ಸಾಮಾರಸ್ಯ ಮೂಡಿಸುಲು, ಉದ್ಯೋಗ ಸೃಷ್ಟಿಯ ಸಲುವಾಗಿ, ದೇಶವನ್ನು ಕಟ್ಟುವ ಉದ್ದೇಶದಿಂದ ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

3 minutes ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

2 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

5 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

10 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

20 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

22 hours ago