ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ- ಜಿ‌ಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಬಳಿ ಇಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ಬೀದರ್ ಇಂದ ಚಾಮರಾಜನಗರ ವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 77 ಕಿಲೋಮೀಟರ್ ಉದ್ದದ ಬೃಹತ್ ಮಾನವ ಸರಪಳಿಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಶ್ರಮಿಸಿದ್ದಾರೆ. ಸಂವಿಧಾನದ ಉಳಿವು ಹಾಗು ಪ್ರಜಾಪ್ರಭುತ್ವದ ರಕ್ಷಣೆ

ಇದರ ಮೂಲ ಉದ್ದೇಶವಾಗಿದೆ. ಭಾರತ ದೇಶದ ಪ್ರತಿಯೊಬ್ಬ ಪ್ರಜೆಯು ಜಾತ್ಯಾತೀತ ಭಾವನೆಯಿಂದ ಬದುಕಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ. ಇದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರ ಕನಸು ಸಹ ಆಗಿತ್ತು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು ಮಾತನಾಡಿ, ಅಂತಾರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ. ನಮ್ಮ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಳ್ಳಲು ಅಧಿಕಾರಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚು ಶ್ರಮವಹಿಸಿದ್ದಾರೆ. ಜಿಲ್ಲೆಯಲ್ಲಿ ಏಕಕಾಲದಲ್ಲಿ ಎರಡು ಕಡೆ ಮಾನವ ಸರಪಳಿ ರಚನೆಯಾಗಿದ್ದು, ಮೊದಲ‌ ಭಾಗದಲ್ಲಿ ನೆಲಮಂಗಲ ತಾಲ್ಲೂಕಿನ ಹಳೆ ನಿಜಗಲ್ ನಿಂದ ಪ್ರಾರಂಭವಾಗಿ ದಾಬಸ್‌ಪೇಟೆ ಮುಖಾಂತರ ‌ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಕ್ರಾಸ್ ವರೆಗೆ 54 ಕಿಲೋ ಮೀಟರ್ ಸರಪಳಿ ರಚನೆಯಾಗಿದೆ. ಎರಡನೇ ಭಾಗದಲ್ಲಿ ಹೊಸಕೋಟೆ ತಾಲ್ಲೂಕಿನ ವೆಂಕಟಪುರದಿಂದ ಪ್ರಾರಂಭಿಸಿ ಮುಗಬಾಳ ಮುಖಾಂತರ ಹೊಸಕೋಟೆಯ ದೊಡ್ಡಮಾನಿಕೆರೆಯವರೆಗೆ 23 ಕಿಲೋಮೀಟರ್ ಸೇರಿ ಒಟ್ಟು 77 ಕಿಲೋಮೀಟರ್ ವರೆಗೆ ಮಾನವ ಸರಪಳಿ ಯಶಸ್ವಿಯಾಗಿದೆ ಎಂದರು.

ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ‌ಸಮಾನತೆ ಸಿಗುವಂತಾಗಬೇಕು. ಯಾವುದೇ ಭೇದ ಭಾವ ಇಲ್ಲದೆ ನಾವೆಲ್ಲರು ಒಂದೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯದ ಹಿತಕ್ಕಾಗಿ ಒಟ್ಟಾಗಿ ದುಡಿಯಬೇಕು. ಆಡಂಬರದ ಆಚರಣೆ ಮಾಡದೆ ಸಂವಿಧಾನದ ಆಶಯದ‌ ಬಗ್ಗೆ ತಿಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರದಲ್ಲಿ ಸಂವಿಧಾನ ಪೀಠಿಕೆಯನ್ನು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಬೋಧಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನಗಳ ಅಧ್ಯಕ್ಷ ಬಿ. ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ, ತಾಲ್ಲೂಕು ತಹಶೀಲ್ದಾರ್ ಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ವಿವಿಧ ಸಂಘಟನೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊನ್ನಘಟ್ಟದಲ್ಲಿ ಮೂರೂವರೆ ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊನ್ನಘಟ್ಟ ಗ್ರಾಮದಲ್ಲಿ ಸುಮಾರು ಮೂರೂವರೆ ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು, ಅದನ್ನು ಬೇರೆಯವರಿಗೆ ಬಾಡಿಗೆಗೆ ನೀಡಲಾಗಿದೆ…

7 hours ago

ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ವಿವಿಧ…

7 hours ago

‘ಬೆಂ.ಗ್ರಾ ಜಿಲ್ಲೆಯಲ್ಲಿ 62,854 ಹೆಕ್ಟೇರ್ ಬೆಳೆ ಹಾನಿ: ರೈತರಿಗೆ 52.88 ಕೋಟಿ ಪರಿಹಾರದ ಅಂದಾಜು’

ದೇವನಹಳ್ಳಿ: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ…

10 hours ago

ಪಾರಿವಾಳ ಗುಟ್ಟದ ಬಳಿ ಕನ್ನಡ ಭವನ, ಆವತಿ ಬಳಿ ಕೆಂಪೇಗೌಡ ಥೀಮ್ ಪಾರ್ಕ್-ಕೆ.ಎಚ್ ಮುನಿಯಪ್ಪ

ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ದೈನಂದಿನ ಜೀವನದಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವ…

11 hours ago

ಕನ್ನಡ ರಾಜ್ಯೋತ್ಸವ: ದೀಪಾಲಂಕಾರದಿಂದ ಕಂಗೊಳಿಸಿದ ಘಾಟಿ ಸುಬ್ರಹ್ಮಣ್ಯ ದೇವಾಲಯ

ದೊಡ್ಡಬಳ್ಳಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.…

14 hours ago

ಫಿಕ್ಸಿಂಗ್ ಮತ್ತು ದಂಧೆ…….

ಕ್ರಿಕೆಟ್ ನಲ್ಲಿ ಫಿಕ್ಸಿಂಗ್, ಕುದುರೆ ರೇಸ್ ನಲ್ಲಿ ಫಿಕ್ಸಿಂಗ್, ರಾಜಕೀಯದಲ್ಲಿ ಫಿಕ್ಸಿಂಗ್, ಸಿನಿಮಾ ಪ್ರಶಸ್ತಿಗಳಲ್ಲಿ ಫಿಕ್ಸಿಂಗ್, ಅಕಾಡೆಮಿಗಳ ಅಧಿಕಾರ ಮತ್ತು…

14 hours ago