ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವಲ್ಲಿ ಯುವಕರ ಪಾತ್ರ ಮಹತ್ತರವಾದದ್ದು-ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್

ಜಗತ್ತಿನಲ್ಲಿ ಅತಿ ದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಬಹಳ ಮಹತ್ವದ್ದಾಗಿದೆ ಯುವಕರು ತಮ್ಮ ಕುಟುಂಬಗಳಲ್ಲಿ, ಸಮಾಜದಲ್ಲಿ ತಿಳಿ ಹೇಳಬೇಕು ಎಂದು ದೊಡ್ಡಬಳ್ಳಾಪುರದ ಉಪ ವಿಭಾಗಾಧಿಕಾರಿ ತೇಜಸ್ ಕುಮಾರ್ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸು ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮುನ್ನುಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಜಾಗೃತಿ ಅಭಿಯಾನ ನಡೆಯುತ್ತಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವುದರ ಮೂಲಕ ಕಡ್ಡಾಯ ಮತದಾನ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಿ.ಇ.ಓ ರೇವಣಪ್ಪ ಮಾತನಾಡಿ ಅರ್ಹರಿರುವ ಪ್ರತಿಯೊಬ್ಬ ಯುವಕರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು, ವಿದ್ಯಾರ್ಥಿಗಳು ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ವಿಷಯಗಳನ್ನ ಅಭ್ಯಾಸ ಮಾಡಬೇಕು, ನವ ಸಮಾಜ ನಿರ್ಮಾಣವಾಗಬೇಕಾದರೆ ಸಂವಿಧಾನದ ಮೌಲ್ಯಗಳನ್ನು, ಸಂವಿಧಾನದ ಮಹತ್ವವನ್ನು , ಅಂಬೇಡ್ಕರ್ ಅವರ ಚಿಂತನೆಗಳನ್ನು ಪ್ರಜ್ಞಾವಂತ ಯುವಕರು ತಿಳಿದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸಿ.ಎ.ಓ ಗಂಗಾಧರಪ್ಪ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರಾದ ಕುಮಾರ್, ಇನಾಂದಾರ್, ಸಿ.ಡಿ.ಪಿ.ಓ.ಅನಿತಾ ಲಕ್ಷ್ಮಿ,
ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಎಚ್. ಆರ್. ಮ್ಯಾನೇಜರ್ ಬಾಬುರೆಡ್ಡಿ, ಕಸಬಾ ರಾಜಸ್ವ ನಿರೀಕ್ಷಕ ನರಸಿಂಹ, ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸಿ.ಎಂ ಸುರೇಂದ್ರ ರೆಡ್ಡಿ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ, ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ. ಚೈತ್ರ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *