ಒಂದು ರಾಷ್ಟ್ರವು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸದೃಢವಾಗಲು ಆ ದೇಶದ ಸಂವಿಧಾನ ಪೀಠಿಕೆಯ ಅಂಶಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಹೇಳಿದರು.
ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ. ನಮ್ಮ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ, ದೊಡ್ಡಬಳ್ಳಾಪುರ ಡಿ.ವೈ.ಎಸ್.ಪಿ ರವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಶ್ರೀಕಂಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್, ಸಂಪನ್ಮೂಲ ವ್ಯಕ್ತಿ ಡಾ.ಅಮೀರ್ ಪಾಷ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…