ಪ್ರಜಾಪ್ರಭುತ್ವ ಸದೃಢತೆಯಲ್ಲಿ ಸಂವಿಧಾನ ಪೀಠಿಕೆ ಮುಖ್ಯ ಪಾತ್ರ ವಹಿಸುತ್ತದೆ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ಒಂದು ರಾಷ್ಟ್ರವು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸದೃಢವಾಗಲು ಆ ದೇಶದ ಸಂವಿಧಾನ ಪೀಠಿಕೆಯ ಅಂಶಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್‌ನ ಡಾ.ಬಿ. ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಅಂತರರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಅರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂವಿಧಾನದ ಪೀಠಿಕೆ ಬೋಧಿಸಿ ಅವರು ಮಾತನಾಡಿದರು.

ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಅಳವಡಿಸಿಕೊಂಡಿರುವ ವಿಶ್ವದ ಪ್ರಜಾಪ್ರಭುತ್ವ ದೇಶಗಳಲ್ಲಿ ಆಚರಿಸಲಾಗುತ್ತಿದೆ. ಭಾರತ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಹೊಂದಿರುವ ದೇಶ. ನಮ್ಮ  ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟು ದೇಶದ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಹೇಳಿದರು.

ದೇವನಹಳ್ಳಿ ಮಿನಿ ವಿಧಾನಸೌಧ ಆವರಣದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಡಾ. ಬಿ. ಆರ್. ಅಂಬೇಡ್ಕರ್ ಭವನದವರೆಗೂ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ, ದೊಡ್ಡಬಳ್ಳಾಪುರ ಡಿ.ವೈ.ಎಸ್.ಪಿ ರವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಶ್ರೀಕಂಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್, ಸಂಪನ್ಮೂಲ ವ್ಯಕ್ತಿ ಡಾ.ಅಮೀರ್ ಪಾಷ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು,  ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

9 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

14 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

17 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago